ಇಂದು ಮತ್ತೆ ರಾಜ್ಯದಲ್ಲಿ 1843 ಪಾಸಿಟಿವ್ ಪ್ರಕರಣ ಪತ್ತೆ ; 30 ಸಾವು
ಬೆಂಗಳೂರು ನಗರ 981, ಬಳ್ಳಾರಿ 99, ಉತ್ತರ ಕನ್ನಡ 81, ದಕ್ಷಿಣ ಕನ್ನಡ 34 ಮತ್ತು ಉಡುಪಿ 40 ಪ್ರಕರಣ ಪತ್ತೆ
Team Udayavani, Jul 6, 2020, 8:44 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಇಂದೂ ಸಹ ಕೋವಿಡ್ 19 ಸೋಂಕಿನ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡಿದೆ.
ನಿನ್ನೆಯಂತೆ ಇಂದೂ ಸಹ ರಾಜ್ಯದಲ್ಲಿ 1843 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 981 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಪತ್ತೆಯಾಗಿದೆ.
ಸೋಂಕಿತರ ವಿಚಾರದಲ್ಲಿ ರಾಜ್ಯ ರಾಜಧಾನಿಯ ಕಥೆ ಶೋಚನೀಯವಾಗುತ್ತಿದೆ. ರಾಜ್ಯದಲ್ಲಿ ಇಂದು ವರದಿಯಾಗಿರುವ ಒಟ್ಟು 1843 ಪಾಸಿಟಿವ್ ಪ್ರಕರಣಗಳಲ್ಲಿ 981 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿದೆ.
ಇಂದು ಒಂದೇ ದಿನ ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ 30 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಸಂಖ್ಯೆ 401ಕ್ಕೆ ಏರಿಕೆಯಾದಂತಾಗಿದೆ.
ಇದನ್ನು ಓದಿ: ಬೀದರ್ ನಲ್ಲಿ ಕೋವಿಡ್ ಅಟ್ಟಹಾಸ : ಇಂದು ಮತ್ತೆ 8 ಜನ ಬಲಿ
ರಾಜ್ಯ ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತೀ ಹೆಚ್ಚಿನ 981 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು ರಾಜಧಾನಿಯಲ್ಲಿ ಸೋಂಕಿನ ಆರ್ಭಟ ಮಿತಿ ಮೀರುತ್ತಿದೆ. ಉಳಿದಂತೆ ಬಳ್ಳಾರಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಧಾರವಾಡ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಇಂದು ಅತೀ ಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗಿವೆ.
ಇದನ್ನು ಓದಿ: ಕೊಪ್ಪಳ: 139ಕ್ಕೆ ಏರಿಕೆಯಾದ ಕೋವಿಡ್ 19 ಸೋಂಕಿತರ ಸಂಖ್ಯೆ
ಇಂದು ರಾಜ್ಯಾದ್ಯಂತ ಒಟ್ಟು 680 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 25317 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 10527 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14385 ಇದೆ.
ಇದನ್ನು ಓದಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೂ ಕೋವಿಡ್ ಪಾಸಿಟಿವ್
ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 401 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 279 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇದನ್ನು ಓದಿ: ಹಾವೇರಿ : ನಾಪತ್ತೆಯಾಗಿದ್ದ ಕೋವಿಡ್ ಸೋಂಕಿತ ರಾಣಿಬೆನ್ನೂರು ಬಸ್ ನಿಲ್ದಾಣದಲ್ಲಿ ಪತ್ತೆ
ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 981 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಬಳ್ಳಾರಿ – 99, ಉತ್ತರ ಕನ್ನಡ – 81, ಬೆಂಗಳೂರು ಗ್ರಾಮಾಂತರ – 68, ಧಾರವಾಡ – 56, ಕಲಬುರಗಿ – 53, ಹಾಸನ – 49, ಮೈಸೂರು – 45, ಬೀದರ್ – 44, ಉಡುಪಿ – 40, ಮಂಡ್ಯ – 39, ವಿಜಯಪುರ – 36, ಯಾದಗಿರಿ – 35, ದಕ್ಷಿಣ ಕನ್ನಡ – 34, ಬಾಗಲಕೋಟೆ – 33, ತುಮಕೂರು – 31, ಶಿವಮೊಗ್ಗ – 24, ಗದಗ – 18, ಚಾಮರಾಜನಗರ – 12, ರಾಮನಗರ – 11, ಕೋಲಾರ – 10 ಸೇರಿದಂತೆ ರಾಜ್ಯದ ಒಟ್ಟು 21 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.
ಇಂದು ರಾಜ್ಯದಲ್ಲಿ ಒಟ್ಟು 15880 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 13742 ವರದಿಗಳು ನೆಗೆಟಿವ್ ಬಂದಿದೆ ಮತ್ತು 1843 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 722305 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 679267 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 25317 ವರದಿಗಳು ಪಾಸಿಟಿವ್ ಆಗಿವೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 10561ಕ್ಕೆ ಏರಿಕೆಯಾಗಿದ್ದು, 1545 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 8860 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 155 ಸಾವುಗಳು ಸಂಭವಿಸಿದೆ.
ಇನ್ನುಳಿದಂತೆ ಕಲಬುರಗಿಯಲ್ಲಿ ಒಟ್ಟು 1699 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1310 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 362 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 27 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1343 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 570 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 737 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 36 ಸಾವು ಸಂಭವಿಸಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 1361 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1143 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 215 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 3 ಸಾವುಗಳು ಸಂಭವಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1268 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು ಇವರಲ್ಲಿ 624 ಸೋಂಕಿತರು ಗುಣಮುಖರಾಗಿದ್ದಾರೆ. 620 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 22 ಸಾವು ಸಂಭವಿಸಿದೆ.
ಯಾದಗಿರಿ ಜಿಲ್ಲೆಯಲ್ಲಿ 1006 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 869 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 136 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.