ಸೋಂಕಿಗಿಲ್ಲ ಲಾಕ್ ಡೌನ್ ; ಒಂದೇ ದಿನ 1925 ಕೋವಿಡ್ 19 ಪ್ರಕರಣ ; 38 ಸಾವು!

ಬೆಂಗಳೂರು ನಗರ 1235, ದಕ್ಷಿಣ ಕನ್ನಡ 147, ಬಳ್ಳಾರಿ 90, ಉಡುಪಿ 45 ಪ್ರಕರಣ ಪತ್ತೆ

Team Udayavani, Jul 5, 2020, 8:38 PM IST

ಸೋಂಕಿಗಿಲ್ಲ ಲಾಕ್ ಡೌನ್ ; ಒಂದೇ ದಿನ 1925 ಪ್ರಕರಣ ; 38 ಸಾವು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯಾದ್ಯಂತ ಇಂದು ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಂಡಿತ್ತು.

ಆದರೆ ಕೋವಿಡ್ 19 ಸೋಂಕಿನ ಆರ್ಭಟ ಮಾತ್ರ ರಾಜ್ಯದಲ್ಲಿ ಡೌನ್ ಆಗಿಲ್ಲ. ಬದಲಾಗಿ ಕಳೆದ ಕೆಲವು ದಿನಗಳಲ್ಲಿ ವರದಿಯಾಗುತ್ತಿರುವುದಕ್ಕಿಂತ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಇಂದು ವರದಿಯಾಗಿದೆ.

ಅದರಲ್ಲೂ ಸೋಂಕಿತರ ವಿಚಾರದಲ್ಲಿ ರಾಜ್ಯ ರಾಜಧಾನಿಯ ಕಥೆ ಶೋಚನೀಯವಾಗುತ್ತಿದೆ. ರಾಜ್ಯದಲ್ಲಿ ಇಂದು ಒಟ್ಟಾರೆ 1925 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ ಅದರಲ್ಲಿ 1235 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿದೆ.

ಇಷ್ಟು ಸಾಲದೆಂಬಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ 38 ಜನ ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಇಂದು ಒಟ್ಟು 603 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ರಾಜ್ಯ ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತೀ ಹೆಚ್ಚಿನ 1235 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು ರಾಜಧಾನಿಯಲ್ಲಿ ಸೋಂಕಿನ ಆರ್ಭಟ ಮಿತಿ ಮೀರುತ್ತಿದೆ. ಉಳಿದಂತೆ ದಕ್ಷಿಣ ಕನ್ನಡ, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಇಂದು ಅತೀ ಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ಮಂಗಳೂರಿನ ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೋವಿಡ್ ಸೋಂಕು ದೃಢ

ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 23474 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 9847 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತು ಸಾವಿರದ ಗಡಿ ದಾಟಿದ್ದು 13250 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 373 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 243 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಕೋವಿಡ್ 19 ಸೋಂಕು ದೃಢ, ಯುವಕ ಪರಾರಿ ; ಹಾವೇರಿಯಲ್ಲೊಂದು ವಿಲಕ್ಷಣ ಘಟನೆ!

ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 1235 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ – 147, ಬಳ್ಳಾರಿ – 90, ವಿಜಯಪುರ – 51, ಕಲಬುರಗಿ – 49, ಉಡುಪಿ – 45, ಧಾರವಾಡ – 38, ಬೀದರ್ – 29, ಮೈಸೂರು – 25, ಕೊಪ್ಪಳ – 22, ಉತ್ತರ ಕನ್ನಡ – 21, ಚಾಮರಾಜನಗರ – 19, ಹಾವೇರಿ – 15, ಹಾಸನ – 14, ಚಿಕ್ಕಬಳ್ಳಾಪುರ – 13, ತುಮಕೂರು – 13, ಕೋಲಾರ – 13, ಬೆಳಗಾವಿ – 11, ದಾವಣಗೆರೆ – 11, ರಾಯಚೂರು – 10 ಹಾಗೂ ಮಂಡ್ಯ – 10 ಸೇರಿದಂತೆ ರಾಜ್ಯದ ಒಟ್ಟು 21 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 9580ಕ್ಕೆ ಏರಿಕೆಯಾಗಿದ್ದು, 1267 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 8167 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 145 ಸಾವುಗಳು ಸಂಭವಿಸಿದೆ.

ಇದನ್ನೂ ಓದಿ: ಪರಿಸ್ಥಿತಿ ನಿಯಂತ್ರಣದಲ್ಲಿದೆ, ಭಯ ಬೇಡ : ಸಚಿವ ಸುಧಾಕರ್‌

ಇನ್ನುಳಿದಂತೆ ಕಲಬುರಗಿಯಲ್ಲಿ ಒಟ್ಟು 1646 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1241 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 378 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 27 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕೋಟದಲ್ಲಿ ಹೋಟೆಲ್ ಸಿಬಂದಿಗಳು ಸೇರಿ ಮತ್ತೆ 9ಮಂದಿಗೆ ಕೋವಿಡ್ ಪಾಸಿಟಿವ್

ಇನ್ನು ಉಡುಪಿ ಜಿಲ್ಲೆಯಲ್ಲಿ 1321 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1125 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 193 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 3 ಸಾವುಗಳು ಸಂಭವಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1234 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು ಇವರಲ್ಲಿ 549 ಸೋಂಕಿತರು ಗುಣಮುಖರಾಗಿದ್ದಾರೆ. 662 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 21 ಸಾವು ಸಂಭವಿಸಿದೆ.

ಇದನ್ನೂ ಓದಿ: ಕೋವಿಡ್‌ ರೋಗಿಗಳ ಚಿಕಿತ್ಸೆಗೆ ನಿರಾಕರಿಸಿದರೆ ಕ್ರಿಮಿನಲ್‌ ಕೇಸ್‌ : ಸಚಿವ ಸುಧಾಕರ್‌

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1244 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 552 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 657 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 35 ಸಾವು ಸಂಭವಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ 971 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 867 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 103 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.

ಇಂದು ರಾಜ್ಯದಲ್ಲಿ ಒಟ್ಟು 16899 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 14649 ವರದಿಗಳು ನೆಗೆಟಿವ್ ಬಂದಿದೆ ಮತ್ತು 1925 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 706425 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 665525 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 23474 ವರದಿಗಳು ಪಾಸಿಟಿವ್ ಆಗಿವೆ.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.