ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ ಅಟ್ಟಹಾಸ; 24ಗಂಟೆಯ ನಂತರ 2ನೇ ಆಸ್ಪತ್ರೆ ಬಂದ್
ಮುಂಜಾಗ್ರತಾ ಕ್ರಮವಾಗಿ ಎರಡೂ ಆಸ್ಪತ್ರೆಗಳನ್ನು ಮುಚ್ಚಲು ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ತಿಳಿಸಿದೆ.
Team Udayavani, Apr 26, 2020, 5:25 PM IST
Representative Image
ನವದೆಹಲಿ:ರಾಷ್ಟ್ರರಾಜಧಾನಿ ದೆಹಲಿಯಲ್ಲಿಯೂ ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುವ ಮೂಲಕ ಭೀತಿ ಮೂಡಿಸಿರುವ ನಡುವೆಯೇ ಕಳೆದ 24ಗಂಟೆಯ ನಂತರ ದೆಹಲಿಯಲ್ಲಿ ಎರಡನೇ ಆಸ್ಪತ್ರೆಯನ್ನು ಸೀಲ್ಡ್ ಮಾಡಲಾಗಿದೆ. ವೈದ್ಯರು ಹಾಗೂ ಸಿಬ್ಬಂದಿಗಳು ಸೇರಿದಂತೆ 44 ಮಂದಿಗೆ ಕೋವಿಡ್ 19 ವೈರಸ್ ಸೋಂಕಿರುವುದು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ಈಗಾಗಲೇ ದೆಹಲಿ ಅತೀ ದೊಡ್ಡ ಆಸ್ಪತ್ರೆ ಎಂದೇ ಹೆಸರಾಗಿದ್ದ ಹಿಂದೂ ರಾವ್ ಆಸ್ಪತ್ರೆಯ ನರ್ಸ್ ಒಬ್ಬರಲ್ಲಿ ಕೋವಿಡ್ 19 ಸೋಂಕು ಪತ್ತೆಯಾದ ನಂತರ ಇಡೀ ಆಸ್ಪತ್ರೆಯನ್ನು ಬಂದ್ ಮಾಡಲಾಗಿತ್ತು. ಇದೀಗ ದಿಲ್ಲಿ ವಾಯುವ್ಯ ಪ್ರದೇಶದ ಜಹಾಂಗಿರ್ ಪುರಿಯ ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸೀಲ್ಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ವಿಶೇಷವಾಗಿ ಆರೈಕೆ ಮಾಡಲಾಗುತ್ತಿದೆ. ಆದರೆ ಯಾವುದೇ ಹೊಸ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ತಿಳಿಸಿದ್ದಾರೆ.
ಕೋವಿಡ್ 19 ವೈರಸ್ ಹರಡದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಎರಡೂ ಆಸ್ಪತ್ರೆಗಳನ್ನು ಮುಚ್ಚಲು ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
MUST WATCH
ಹೊಸ ಸೇರ್ಪಡೆ
3 ತಿಂಗಳಿಂದ ಸಂಬಳ ನೀಡದ್ದಕ್ಕೆ 30 ಅಡಿ ಎತ್ತರದ ಕಂಬ ಏರಿ ಆತ್ಮಹ*ತ್ಯೆಗೆ ಯತ್ನ
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ
Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ
UK ಚೆವನಿಂಗ್-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.