ಕೋವಿಡ್ 19: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3722 ಪ್ರಕರಣ ಪತ್ತೆ, 134 ಮಂದಿ ಸಾವು
ಈವರೆಗೆ ಭಾರತದಲ್ಲಿ 26,234 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ಸಚಿವಾಲಯ ವಿವರಿಸಿದೆ.
Team Udayavani, May 14, 2020, 12:07 PM IST
ನವದೆಹಲಿ:ಕಳೆದ 24ಗಂಟೆಯಲ್ಲಿ 3,722 ಕೋವಿಡ್ 19 ವೈರಸ್ ನ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 134 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ವೈರಸ್ ತಗುಲಿದವರ ಸಂಖ್ಯೆ 78,003ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
49,219 ಮಂದಿಗೆ ಸೋಂಕು ದೃಢಪಟ್ಟಿದ್ದು, ಈವರೆಗೆ 2,549 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಭಾರತದಲ್ಲಿ 26,234 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ಸಚಿವಾಲಯ ವಿವರಿಸಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ 19 ವೈರಸ್ ಪ್ರಕರಣ ಮಿತಿಮೀರಿದ್ದು, 25,922 ಪ್ರಕರಣಗಳು ಪತ್ತೆಯಾಗಿದೆ. ಗುಜರಾತ್ ನಲ್ಲಿ 9,267, ತಮಿಳುನಾಡಿನಲ್ಲಿ 9,227 ಪ್ರಕರಣ ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ 975ಕ್ಕೆ ಏರಿಕೆಯಾಗಿದೆ. ಗುಜರಾತ್ ನಲ್ಲಿ 566 ಹಾಗೂ ಮಧ್ಯಪ್ರದೇಶದಲ್ಲಿ 232 ಮಂದಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.