ರಾಜ್ಯದಲ್ಲಿ ಇಂದು 397 ಹೊಸ ಸೋಂಕು ಪ್ರಕರಣ ; 14 ಸಾವು
ಬೆಂಗಳೂರಿನಲ್ಲಿ 173, ಉಡುಪಿ 14, ದಕ್ಷಿಣ ಕನ್ನಡ 12 ಸೋಂಕು ಪ್ರಕರಣಗಳು ಪತ್ತೆ
Team Udayavani, Jun 24, 2020, 8:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಸೋಂಕು ಪ್ರಕರಣಗಳ ವರದಿ ಮುಂದುವರೆದಿದೆ.
ಒಟ್ಟಾರೆಯಾಗಿ ಇಂದು ವಿವಿಧ ಜಿಲ್ಲೆಗಳಲ್ಲಿ ಒಟ್ಟು 397 ಕೋವಿಡ್ 19 ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಮತ್ತು ಇಂದು ಒಂದೇ ದಿನ 14 ಜನ ಕೋವಿಡ್ 19 ಸೊಂಕಿತರು ಮೃತಪಟ್ಟಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟಾರೆ ಕೋವಿಡ್ 19 ಸೋಂಕಿನ ಪ್ರಕರಣ ಸಂಖ್ಯೆ 10118ರ ಗಡಿ ಮುಟ್ಟಿದೆ. ಆದರೆ ಆಶಾದಾಯಕ ವಿಷಯವೆಂದರೆ ಇವರಲ್ಲಿ 6151 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆಯಾಗಿ ಕೋವಿಡ್ 19 ಮಹಾಮಾರಿಗೆ 164 ಜನರು ಮೃತಪಟ್ಟಿದ್ದಾರೆ ಮತ್ತು ಕೋವಿಡ್ ಸೋಂಕಿತ ಪ್ರಕರಣಗಳು ಅನ್ಯ ಕಾರಣದಿಂದ ಮೃತಪಟ್ಟವರ ಸಂಖ್ಯೆ 4.
3799 ಕೋವಿಡ್ ಸೋಂಕಿತರು ರಾಜ್ಯದ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಇವರಲ್ಲಿ 112 ಜನ ಸೋಂಕಿತರು ಐ.ಸಿ.ಯು.ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಮಂಗಳವಾರದಂತೆ ಇಂದೂ ಸಹ ರಾಜಧಾನಿ ಬೆಂಗಳೂರಿನಲ್ಲೇ ಅತೀ ಹೆಚ್ಚಿನ ಅಂದರೆ 173 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇನ್ನುಳಿದಂತೆ ಬಳ್ಳಾರಿ (34), ಕಲಬುರಗಿ (22), ರಾಮನಗರ (22), ಉಡುಪಿ (14), ಯಾದಗಿರಿ (13), ದಕ್ಷಿಣ ಕನ್ನಡ (12), ಧಾರವಾಡ (12), ಕೊಪ್ಪಳ (11) ಜಿಲ್ಲೆಗಳಲ್ಲಿ ಹೆಚ್ಚಿನ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಕಲಬುರಗಿ ಜಿಲ್ಲೆಯಲ್ಲಿ ಇಂದು 50 ಸೋಂಕಿತರು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬೆಂಗಳೂರು ನಗರದಲ್ಲಿ 41 ಸೋಂಕಿತರು, ವಿಜಯಪುರದಲ್ಲಿ 10, ಬೀದರ್ ನಲ್ಲಿ 12 ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 149 ಕೋವಿಡ್ 19 ಸೋಂಕಿತರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇಂದು ವಿದೇಶದಿಂದ ರಾಜ್ಯಕ್ಕೆ ಬಂದ 08 ಜನರಲ್ಲಿ ಕೋವಿಡ್ 19 ಸೋಂಕು ಪಾಸಿಟಿವ್ ಪತ್ತೆಯಾಗಿದ್ದು 75 ಜನ ಸೋಂಕಿತರು ಅಂತರ್ ರಾಜ್ಯ ಪ್ರಯಾಣದ ಹಿನ್ನಲೆಯನ್ನು ಹೊಂದಿದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.