ರಾಜ್ಯದಲ್ಲಿ ಇಂದು 445 ಕೋವಿಡ್ ಪ್ರಕರಣ ಪತ್ತೆ ; 10 ಸೋಂಕಿತರು ಸಾವು
ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಪ್ರಕರಣ ; ದಕ್ಷಿಣ ಕನ್ನಡ 33, ಉಡುಪಿ 9 ಪ್ರಕರಣ
Team Udayavani, Jun 26, 2020, 9:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರದಂದು ಒಟ್ಟು 445 ಜನರು ಕೋವಿಡ್ 19 ಸೋಂಕಿಗೆ ತುತ್ತಾಗಿದ್ದಾರೆ.
ಮತ್ತು ಈ ಸಂಖ್ಯೆ ಕಳೆದೆರಡು ದಿನಗಳ ಕೋವಿಡ್ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿರುವುದು ಆತಂಕದ ವಿಚಾರವಾಗಿದೆ.
ಮಾತ್ರವಲ್ಲದೇ ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 10 ಜನರು ಬಲಿಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಇಂದಿನವರೆಗೆ 11005 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 6916 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ 3905 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟಾರೆಯಾಗಿ 180 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 178 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 144 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಬಳ್ಳಾರಿ – 47, ಕಲಬುರಗಿ – 42, ಕೊಪ್ಪಳ – 36, ದಕ್ಷಿಣ ಕನ್ನಡ – 33, ಧಾರವಾಡ – 30, ರಾಯಚೂರು – 14, ಗದಗ – 12, ಚಾಮರಾಜನಗರ – 11, ಉಡುಪಿ – 9 ಕೋವಿಡ್ 19 ಸೋಂಕಿನ ಪ್ರಕರಣಗಳು ಇಂದು ಪತ್ತೆಯಾಗಿದೆ.
ಇಂದು ರಾಜ್ಯದಲ್ಲಿ ಒಟ್ಟಾರೆ 14733 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇದರಲ್ಲಿ 13817 ಪ್ರಕರಣಗಳ ವರದಿ ನೆಗೆಟಿವ್ ಬಂದಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 568058 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 541548 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 11005 ವರದಿಗಳು ಪಾಸಿಟಿವ್ ಆಗಿವೆ.
ರಾಜ್ಯಕ್ಕೆ ಇಂದು ಸ್ಯಾನ್ ಫ್ರ್ಯಾನ್ಸಿಸ್ಕೋದಿಂದ ಬಂದ ವಿಮಾನದಲ್ಲಿ 76 ಪ್ರಯಾಣಿಕರು ಬಂದಿದ್ದು, ಯಮೆನ್ ನಿಂದ ಬಂದ ವಿಮಾನದಲ್ಲಿ 24 ಜನರು ಆಗಮಿಸಿದ್ದಾರೆ. ಇಂದು ರಾಜ್ಯದ ವಿಮಾನ ನಿಲ್ದಾಣಗಳಲ್ಲಿ 100 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ.
ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಇದುವರೆಗೆ ಒಟ್ಟು 1935 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು 526 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 1327 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 81 ಸಾವುಗಳು ಸಂಭವಿಸಿವೆ.
ಇನ್ನುಳಿದಂತೆ ಕಲಬುರಗಿಯಲ್ಲಿ ಒಟ್ಟು 1331 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 935 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 381 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 15 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 1125 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1028 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 95 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 2 ಸಾವುಗಳು ಸಂಭವಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 519 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು ಇವರಲ್ಲಿ 366 ಸೋಂಕಿತರು ಗುಣಮುಖರಾಗಿದ್ದಾರೆ. 143 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 8 ಸಾವು ಸಂಭವಿಸಿದೆ.
ಯಾದಗಿರಿ ಜಿಲ್ಲೆಯಲ್ಲಿ 916 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 685 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 230 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.