ಕೋವಿಡ್ 19 ಕಳವಳ-ಆಗಸ್ಟ್ 03: 4752 ಹೊಸ ಪ್ರಕರಣಗಳು ; 4776 ಡಿಸ್ಚಾರ್ಜ್ ; 98 ಸಾವು

ಬೆಂಗಳೂರು ನಗರ 1497, ಮೈಸೂರು 372, ಬಳ್ಳಾರಿ 305, ಬಾಗಲಕೋಟೆ 209, ದಕ್ಷಿಣ ಕನ್ನಡ 153, ಉಡುಪಿ 126

Team Udayavani, Aug 3, 2020, 7:27 PM IST

ಕೋವಿಡ್ ಕಳವಳ-ಆಗಸ್ಟ್ 03: 4752 ಹೊಸ ಪ್ರಕರಣಗಳು ; 4776 ಡಿಸ್ಚಾರ್ಜ್ ; 98 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರವಿವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 4752 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 4776 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 98 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1,39,571 ಆಗಿದೆ. 62,500 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 2594 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 629 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 74469 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 1497 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (372), ಬಳ್ಳಾರಿ (305), ಬಾಗಲಕೋಟೆ (209), ಧಾರವಾಡ (191), ಕಲಬುರಗಿ (170), ಕೊಪ್ಪಳ (157), ಶಿವಮೊಗ್ಗ (155), ದಕ್ಷಿಣ ಕನ್ನಡ (153), ಮಂಡ್ಯ (152), ಹಾಸನ (131), ಉಡುಪಿ (126), ತುಮಕೂರು (122), ರಾಯಚೂರು (115) ಮತ್ತು ಗದಗ (92) ಜಿಲ್ಲೆಗಳಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಪರ್ಕದಲ್ಲಿದ್ದ 2.60 ಲಕ್ಷ ಜನ ಕ್ವಾರಂಟೈನ್ ಗೆ

ಇನ್ನುಳಿದಂತೆ, ಹಾವೇರಿ (99), ವಿಜಯಪುರ (92), ಯಾದಗಿರಿ (86), ರಾಮನಗರ (68), ಬೆಳಗಾವಿ (60), ಚಿಕ್ಕಬಳ್ಳಾಪುರ (58), ಚಾಮರಾಜನಗರ (52), ಬೀದರ್ (50), ಚಿಕ್ಕಮಗಳೂರು (46), ದಾವಣಗೆರೆ (41), ಕೋಲಾರ (40), ಕೊಡಗು (39), ಚಿತ್ರದುರ್ಗ (33), ಉತ್ತರಕನ್ನಡ (31) ಮತ್ತು ಬೆಂಗಳೂರು ಗ್ರಾಮಾಂತರ (02) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 18074 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 9915 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 27989 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ಇದನ್ನೂ ಓದಿ: ಶಾ ಹಾಗೂ ಬಿಎಸ್ ವೈ ಶೀಘ್ರ ಗುಣಮುಖರಾಗಲೆಂದು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ

ರಾಜ್ಯದಲ್ಲಿ ಇದುವರೆಗೆ ಒಟ್ಟು 204921 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 12,41,637 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 14,46,558 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 60998ಕ್ಕೆ ಏರಿಕೆಯಾಗಿದ್ದು, 23603 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 36290ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1104 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 7354 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3241 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 4034 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 79 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 6163ಕ್ಕೆ ಏರಿಕೆಯಾಗಿದ್ದು ಇವರಲ್ಲಿ 2849 ಸೋಂಕಿತರು ಗುಣಮುಖರಾಗಿದ್ದಾರೆ. 3147 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 165 ಸಾವು ಸಂಭವಿಸಿದೆ. ಬೆಂಗಳೂರು ನಗರ (1104) ಹಾಗೂ ಮೈಸೂರು (174) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.

ಕಲಬುರಗಿಯಲ್ಲಿ ಒಟ್ಟು 5937 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 3318 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2508 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 111 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಕೋವಿಡ್ 19 ಸೊಂಕಿಗೆ ಇಂದು ಎರಡು ಬಲಿ ; 52 ಹೊಸ ಪ್ರಕರಣ

ಮೈಸೂರು ಜಿಲ್ಲೆಯಲ್ಲಿ 5192 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2066 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2952 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 174 ಸಾವು ಸಂಭವಿಸಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ 4799 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2728 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2035 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 36 ಸಾವಿನ ಪ್ರಕರಣಗಳು ದಾಖಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 4647 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1934 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2558 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 155 ಸಾವು ಸಂಭವಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ 3681 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1054 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2542 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 85 ಸಾವು ಸಂಭವಿಸಿದೆ.

ಇದನ್ನೂ ಓದಿ: ಬಾಗಲಕೋಟೆ ಒಂದೇ ದಿನ ದ್ವಿ ಶತಕ ಬಾರಿಸಿದ ಕೋವಿಡ್ ಸೋಂಕು

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.