ಉತ್ತರಪ್ರದೇಶ: ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ಕೇಸ್-ಐವರು ಆರೋಪಿಗಳಿಗೆ ಕೋವಿಡ್ 19 ಸೋಂಕು ದೃಢ
ಉದ್ರಿಕ್ತ ಗುಂಪು ಸಿಬ್ಬಂದಿ ಹಾಗೂ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ನಾಲ್ವರು ಗಾಯಗೊಂಡಿದ್ದರು.
Team Udayavani, Apr 21, 2020, 7:35 PM IST
Representative Image
ಲಕ್ನೋ: ಕಳೆದ ವಾರ ಉತ್ತರಪ್ರದೇಶದ ಮೋರಾದಾಬಾದ್ ನಲ್ಲಿ ವೈದ್ಯರ ತಂಡದ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧಿತರಾದ 17 ಮಂದಿಯಲ್ಲಿ ಐವರಿಗೆ ಕೋವಿಡ್ 19 ವೈರಸ್ ತಗುಲಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಇವರನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಇನ್ನೂ ಹತ್ತು ಮಂದಿಗೆ ಕೋವಿಡ್ 19 ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ವರದಿ ವಿವರಿಸಿದೆ. ಆರೋಗ್ಯ ಸಿಬ್ಬಂದಿ, ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ 17 ಮಂದಿಯನ್ನು ಬಂಧಿಸಲಾಗಿತ್ತು.
ಮೋರಾದಾಬಾದ್ ನ ನವಾಬ್ ಪುರದಲ್ಲಿ ಕೋವಿಡ್ 19 ವೈರಸ್ ಸೋಂಕಿತ ಕುಟುಂಬದ ಸದಸ್ಯರನ್ನು ಐಸೋಲೇಶನ್ ನಲ್ಲಿ ಇರಿಸಲು ವೈದ್ಯ ಸಿಬ್ಬಂದಿಗಳು ಭೇಟಿ ನೀಡಿದ್ದರು. ಈ ವೇಳೆ ಉದ್ರಿಕ್ತ ಗುಂಪು ಸಿಬ್ಬಂದಿ ಹಾಗೂ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ನಾಲ್ವರು ಗಾಯಗೊಂಡಿದ್ದರು.
ಬಂಧಿತರಲ್ಲಿ ಐವರ ವರದಿ ಪಾಸಿಟಿವ್ ಎಂದು ಬಂದಿದ್ದು, ಉಳಿದ ಎಲ್ಲಾ ಆರೋಪಿಗಳ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ರಾಮ್ ಮನೋಹರ್ ಲೋಹಿಯಾ ಮೆಡಿಕಲ್ ಸೈನ್ಸ್ ಇನ್ಸ್ ಟಿಟ್ಯೂಟ್ ಗೆ ಕಳುಹಿಸಲಾಗಿದೆ ಎಂದು ಡಾ.ಮಿಲಿಂದ್ ಗರ್ಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.