ಕೋವಿಡ್ ಕಳವಳ-ಜು.31: 5483 ಹೊಸ ಪ್ರಕರಣಗಳು ; 3130 ಡಿಸ್ಚಾರ್ಜ್ ; 84 ಸಾವು
ಬೆಂಗಳೂರು ನಗರ 2220, ಬಳ್ಳಾರಿ 340, ಬೆಳಗಾವಿ 217, ಉಡುಪಿ 213, ದಕ್ಷಿಣಕನ್ನಡ 204, ಮೈಸೂರು 204
Team Udayavani, Jul 31, 2020, 8:03 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಗುರುವಾರ ಸಾಯಂಕಾಲದಿಂದ ಶುಕ್ರವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5483 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 3130 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 84 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 124115 ಆಗಿದೆ. 49788 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 2314 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 609 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 72005 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2220 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (340), ಬೆಳಗಾವಿ (217), ಉಡುಪಿ (213), ದಕ್ಷಿಣ ಕನ್ನಡ (204), ಮೈಸೂರು (204), ಧಾರವಾಡ (180), ಶಿವಮೊಗ್ಗ (158), ಕಲಬುರಗಿ (144), ದಾವಣಗೆರೆ (122), ರಾಯಚೂರು (119), ವಿಜಯಪುರ (118), ಬೆಂಗಳೂರು ಗ್ರಾಮಾಂತರ (105), ಬೀದರ್ (104) ಮತ್ತು ಹಾಸನ (100) ಜಿಲ್ಲೆಗಳಿವೆ.
ಇನ್ನುಳಿದಂತೆ, ತುಮಕೂರು- 95, ಉತ್ತರಕನ್ನಡ- 92, ಗದಗ – 92, ರಾಮನಗರ – 89, ಬಾಗಲಕೋಟೆ – 88, ಚಿಕ್ಕಮಗಳೂರು – 74, ಮಂಡ್ಯ – 65, ಹಾವೇರಿ – 57, ಯಾದಗಿರಿ – 56, ಚಿಕ್ಕಬಳ್ಳಾಪುರ – 48, ಚಾಮರಾಜನಗರ – 44, ಕೊಪ್ಪಳ – 38, ಚಿತ್ರದುರ್ಗ – 35, ಕೋಲಾರ – 32, ಮತ್ತು ಕೊಡಗು – 30 ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 22164 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು ಈ ಮೂಲಕ ರಾಜ್ಯದಲ್ಲಿ Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳ ಒಟ್ಟು ಸಂಖ್ಯೆ 147255ಕ್ಕೆ ಏರಿಕೆಯಾಗಿದೆ.
ಇನ್ನುಳಿದಂತೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 14772 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಒಟ್ಟಾರೆಯಾಗಿ ಒಂದೇ ದಿನದಲ್ಲಿ 36936 ಸೋಂಕು ಪತ್ತೆ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದ್ದು, ಇಲ್ಲಿಯವರೆಗೆ ರಾಜ್ಯಾದ್ಯಂತ ಒಟ್ಟು 13,50,792 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.