ದೇಶದ 736ರ ಪೈಕಿ 550 ಜಿಲ್ಲೆಗಳಲ್ಲಿ ಕೋವಿಡ್ ಕರಿನೆರಳು
ವಲಸೆ ಕಾರ್ಮಿಕರ ಮರಳುವಿಕೆಯೇ ಹೆಚ್ಚಳಕ್ಕೆ ಕಾರಣ
Team Udayavani, May 19, 2020, 6:35 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದಲ್ಲಿ ನಾಲ್ಕನೇ ಹಂತದ ಲಾಕ್‌ಡೌನ್ ಆರಂಭವಾಗಿ, ಬಹುತೇಕ ರಾಜ್ಯಗಳಲ್ಲಿ ನಿರ್ಬಂಧಗಳು ಸಡಿಲಿಕೆಯಾಗುತ್ತಿರುವಂತೆಯೇ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೊಸ ಸವಾಲುಗಳು ಹುಟ್ಟಿಕೊಂಡಿವೆ.
ಒಂದು ಕಡೆ, ಸೋಂಕಿತರ ಸಂಖ್ಯೆಯು ದಿನಕಳೆದಂತೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದರೆ, ಮತ್ತೂಂದು ಕಡೆ ದೇಶದ 736 ಜಿಲ್ಲೆಗಳ ಪೈಕಿ 550 ಜಿಲ್ಲೆಗಳಿಗೆ ಕೋವಿಡ್ ವ್ಯಾಪಿಸಿದೆ. ಅಂದರೆ ಕೇವಲ 14 ದಿನಗಳಲ್ಲಿ ಸುಮಾರು 180 ಜಿಲ್ಲೆಗಳಿಗೆ ಈ ಸೋಂಕು ಪ್ರವೇಶಿಸಿದೆ.
ಮೇ 1ರಿಂದ ಅತಿ ಹೆಚ್ಚು ಪ್ರಕರಣಗಳನ್ನು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತ ರಪ್ರದೇಶದ ಜಿಲ್ಲೆಗಳು ಕಂಡಿವೆ. ವಿವಿಧ ರಾಜ್ಯಗಳಲ್ಲಿನ ಸೋಂಕಿನ ಪ್ರಕರಣಗಳ ಆಧಾರದಲ್ಲಿ ಈ ದತ್ತಾಂಶವನ್ನು ಸಂಗ್ರಹಿಸಲಾಗಿದೆ.
ಕಾರಣವೇನು?: ಈ ರಾಜ್ಯಗಳಲ್ಲಿ ಸೋಂಕಿನ ಪ್ರಕರಣ ಏಕಾಏಕಿ ಹೆಚ್ಚಳವಾಗಲು ವಲಸೆ ಕಾರ್ಮಿಕರೇ ಕಾರಣ ಎನ್ನುತ್ತಾರೆ ಸರಕಾರಿ ಅಧಿಕಾರಿಗಳು. ದೇಶದ ಮೂಲೆ ಮೂಲೆಗಳಲ್ಲಿ ಅತಂತ್ರರಾಗಿದ್ದ ಸಾವಿರಾರು ಕಾರ್ಮಿಕರು ಲಾಕ್ ಡೌನ್ ಹಿನ್ನೆಲೆಯಲ್ಲಿ ತಮ್ಮೂರುಗಳಿಗೆ ಮರಳಿದ ಕಾರಣ, ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಅಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಮೂಲ ಸೌಕರ್ಯಗಳಿಗೂ ಕೊರತೆಯಿರುವುದು ಸಮಸ್ಯೆಯನ್ನು ಇನ್ನಷ್ಟು ಜಟಿಲಗೊಳಿಸಿದೆ.
ಊರುಗಳಿಗೆ ಮರಳಿರುವ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ರೋಗಲಕ್ಷಣ ಕಂಡು ಬಂದಿಲ್ಲ. ಆದರೆ ಅವರಲ್ಲಿ ಒಂದು ವೇಳೆ ರೋಗ ಲಕ್ಷಣ ರಹಿತ ಸೋಂಕು ಇದ್ದಲ್ಲಿ, ಅವರಿಂದಾಗಿ ಇತರರಿಗೆ ಸೋಂಕು ವ್ಯಾಪಿಸುವ ಸಾಧ್ಯತೆಯಿದೆ. ಈವರೆಗೆ ಕೇವಲ ಶೇ.20ರಷ್ಟು ಕಾರ್ಮಿಕರು ಊರುಗಳಿಗೆ ವಾಪಸಾಗಿದ್ದಾರೆ.
ಇದಾದ ಬಳಿಕ ನಮ್ಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೋಂಕು ವ್ಯಾಪಿಸಿದೆ. ಹೀಗಿರುವಾಗ, ಎಲ್ಲ ವಲಸೆ ಕಾರ್ಮಿಕರೂ ಊರುಗಳಿಗೆ ಮರಳಿದರೆ ಪರಿಸ್ಥಿತಿ ಏನಾಗಬಹುದೆಂದು ಕಲ್ಪಿಸಿಕೊಳ್ಳಿ. ಅವರೆಲ್ಲರನ್ನೂ ಕ್ವಾರಂಟೈನ್‌ನಲ್ಲಿ ಇಡುವುದಾದರೂ ಹೇಗೆ’ ಎಂದು ಬಿಹಾರದ ಹಿರಿಯ ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ.
ಹಲವು ಸವಾಲುಗಳು: ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಲಗಳಲ್ಲಿ ವಲಸೆ ಕಾರ್ಮಿಕರು ಕ್ವಾರಂಟೈನ್ ಕೇಂದ್ರಗಳಿಂದ ತಪ್ಪಿಸಿಕೊಂಡು ಹೋಗಿರುವ ಎಷ್ಟೋ ಪ್ರಕರಣಗಳು ವರದಿಯಾಗುತ್ತಿವೆ. ಇಂಥ ಪ್ರಕರಣ ಹೆಚ್ಚಾದಷ್ಟೂ ಸೋಂಕಿತರ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆಯಿದ್ದು, ಈ ಎಲ್ಲ ಬೆಳವಣಿಗೆಗಳು ಸರಕಾರಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿವೆ. ಅಲ್ಲದೆ, ಈ ರಾಜ್ಯಗಳಲ್ಲಿ ಕೋವಿಡ್ ಮುಕ್ತ ಜಿಲ್ಲೆಗಳು ಎಂದು ಪರಿಗಣಿಸಲ್ಪಟ್ಟಿರುವ ಪ್ರದೇಶಗಳೆಲ್ಲ ದೂರದ ಬುಡಕಟ್ಟು ಜನರಿರುವ ಹಾಗೂ ಬಡ ಜಿಲ್ಲೆಗಳೇ ಆಗಿವೆ. ಈ ಪ್ರದೇಶಗಳಲ್ಲಿ ಸಾಕಷ್ಟು ಪರೀಕ್ಷೆಗಳು ಕೂಡ ನಡೆದಿಲ್ಲ ಎನ್ನುತ್ತಾರೆ ಅಧಿಕಾರಿಗಳು.
ಎಷ್ಟು ಜಿಲ್ಲೆಗಳಲ್ಲಿ ಪ್ರವೇಶ?: ಬಿಹಾರದ ಎಲ್ಲ 36 ಜಿಲ್ಲೆಗಳು, ಒಡಿಶಾದ 30 ಜಿಲ್ಲೆಗಳ ಪೈಕಿ ಮೂರನೇ ಎರಡರಷ್ಟು ಜಿಲ್ಲೆಗಳು, ಮಧ್ಯಪ್ರದೇಶದ 55 ಜಿಲ್ಲೆಗಳ ಪೈಕಿ ಶೇ.80, ಜಾರ್ಖಂಡ್ ನ 24 ಜಿಲ್ಲೆಗಳ ಪೈಕಿ ಅರ್ಧಕ್ಕೂ ಹೆಚ್ಚು, ರಾಜಸ್ಥಾನದ 33 ಜಿಲ್ಲೆಗಳು, ಛತ್ತೀಸ್‌ಗಢದ 28 ಜಿಲ್ಲೆಗಳ ಪೈಕಿ ಮೂರನೇ ಒಂದರಷ್ಟು ಜಿಲ್ಲೆಗಳಿಗೆ ಈಗಾಗಲೇ ಕೋವಿಡ್ ವ್ಯಾಪಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದ ಒಟ್ಟಾರೆ ಸೋಂಕಿತರ ಪೈಕಿ ಶೇ.21ರಷ್ಟು ಪ್ರಕರಣಗಳು ಪತ್ತೆಯಾಗಿರುವುದು ಗ್ರಾಮೀಣ ಪ್ರದೇಶದ ಜಿಲ್ಲೆಗಳಲ್ಲಿ. ಆದರೆ, ಈ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ದಿನ ದೂರವಿಲ್ಲ ಎಂದೂ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಒಡಿಶಾದ ಗಂಜಾಮ್ ಜಿಲ್ಲೆ (292 ಪ್ರಕರಣ) ಮತ್ತು ಬಿಹಾರದ ಮುಂಗೇರ್ (195 ಪ್ರಕರಣ) ಜಿಲ್ಲೆ ಹೊರತುಪಡಿಸಿದರೆ, ದೇಶದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಒಂದಂಕಿ ಯಲ್ಲಿವೆ ಎಂದೂ ಅವರು ಹೇಳಿದ್ದಾರೆ.
ಒಂದೇ ದಿನ 5242 ಮಂದಿಗೆ ಸೋಂಕು
ಕೋವಿಡ್ ವೈರಸ್ ವ್ಯಾಪಿಸುವಿಕೆಗೆ ಕಡಿವಾಣ ಹಾಕಲು ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸೋಂಕಿತರ ಸಂಖ್ಯೆ ಮಾತ್ರ ಇಳಿಮುಖವಾಗುವ ಲಕ್ಷಣ ಕಾಣುತ್ತಿಲ್ಲ. ದೇಶಾದ್ಯಂತ ಲಾಕ್ ಡೌನ್ 4.0 ಜಾರಿಯಾಗುತ್ತಿದ್ದಂತೆಯೇ, ಸೋಂಕಿತರ ಸಂಖ್ಯೆ ಒಂದು ಲಕ್ಷದ ಸಮೀಪಕ್ಕೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ.
ರವಿವಾರ ಬೆಳಗ್ಗೆ 8 ರಿಂದ ಸೋಮವಾರ ಬೆಳಗ್ಗೆ 8ರವರೆಗೆ ಅಂದರೆ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಬರೋಬ್ಬರಿ 5,242 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 157 ಮಂದಿ ಸಾವಿಗೀಡಾಗಿದ್ದಾರೆ. ಒಂದೇ ದಿನ ಇಷ್ಟೊಂದು ಪ್ರಕರಣ ಪತ್ತೆಯಾಗಿರುವುದು ಇದೇ ಮೊದಲು. ಇದೇ ವೇಳೆ, 36,823 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಅಂದರೆ ಒಟ್ಟಾರೆ ಶೇ.38.29ರಷ್ಟು ರೋಗಿಗಳು ಗುಣಮುಖರಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ 23 ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಪತ್ತೆ
ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಬರಮಾಡಿಕೊಳ್ಳುತ್ತಿರುವ ರಾಜ್ಯಗಳು ಮಾತ್ರವಲ್ಲದೆ, ಕರ್ನಾಟಕ, ತಮಿಳುನಾಡು, ಹರ್ಯಾಣದಂಥ ರಾಜ್ಯಗಳ ಜಿಲ್ಲೆಗಳಿಗೂ ಕೋವಿಡ್ ವ್ಯಾಪಿಸಿದೆ. ಕರ್ನಾಟಕದ 30 ಜಿಲ್ಲೆಗಳ ಪೈಕಿ 23ರಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ತಮಿಳುನಾಡಿನಲ್ಲಿ ಎಲ್ಲ 38 ಹಾಗೂ ಹರ್ಯಾಣದಲ್ಲಿ ಎಲ್ಲ 22 ಜಿಲ್ಲೆಗಳಲ್ಲೂ ಸೋಂಕು ಪತ್ತೆಯಾಗಿದೆ.
ಮಹಾರಾಷ್ಟ್ರವೊಂದರಲ್ಲೇ 3ನೇ ಒಂದರಷ್ಟು ಪ್ರಕರಣ ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದೆ. ದೇಶದ ಒಟ್ಟು ಸರಾಸರಿಯ ಮೂರನೇ ಒಂದರಷ್ಟು ಪ್ರಕರಣ ಮಹಾರಾಷ್ಟ್ರದಲ್ಲೇ ದಾಖಲಾಗಿದೆ.
ಇಲ್ಲಿ ಸೋಂಕಿತರ ಸಂಖ್ಯೆ 33 ಸಾವಿರದ ಗಡಿ ದಾಟಿದ್ದು, ಸಾವಿನ ಸಂಖ್ಯೆಯೂ 2 ಸಾವಿರ ಆಗಿದೆ.
ಇನ್ನು, ಎರಡನೇ ಸ್ಥಾನದಲ್ಲಿರುವ ಗುಜರಾತ್‌ನಲ್ಲಿ 12 ಸಾವಿರದಷ್ಟು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈವರೆಗೆ 659 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ತಮಿಳುನಾಡಿನಲ್ಲೂ ದಿನೇ ದಿನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ದಿಲ್ಲಿಯಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಿದ್ದರೆ, ರಾಜಸ್ಥಾನ, ಮಧ್ಯಪ್ರದೇಶಗಳಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಬೇಡಿಕೆಗೆ ಒಪ್ಪಿದ ಉ.ಪ್ರ.ಸಿಎಂ
‘ರಾಜಸ್ಥಾನದಿಂದ ವಲಸೆ ಕಾರ್ಮಿಕರಿಗಾಗಿ ನಿಯೋಜಿಸಿರುವ ಒಂದು ಸಾವಿರ ಬಸ್‌ಗಳು ಉತ್ತರ ಪ್ರದೇಶಕ್ಕೆ ಪ್ರವೇಶಿಸಲು ಅನುಮತಿ ನೀಡಬೇಕು’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮನವಿಯನ್ನು ಉತ್ತರ ಪ್ರದೇಶ ಸರ್ಕಾರ ಪುರಸ್ಕರಿಸಿದೆ. ಈ ಸಂಬಂಧ ಬಸ್‌ಗಳ ವಿವರ, ಚಾಲಕರು, ನಿರ್ವಾಹಕರ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದೆ.
ಇತ್ತೀಚೆಗೆ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರ್ಕಾರ ಕಾರ್ಮಿಕ ವಿಷಯದಲ್ಲಿ ನಿರ್ಲಕ್ಷ್ಯ ತೋರಿದೆ. ವಲಸೆ ಕಾರ್ಮಿಕರಿಗಾಗಿ ಒಂದು ಸಾವಿರ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಈ ಬಸ್‌ಗಳು ಉತ್ತರ ಪ್ರದೇಶದ ಗಡಿಯಲ್ಲಿದ್ದು, ರಾಜ್ಯವನ್ನು ಪ್ರವೇಶಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದರು.
ಕೋಲ್ಕತಾಗೆ ಬಂತು ವಿಮಾನ
ಪ. ಬಂಗಾಳ ಮತ್ತು ಕೇಂದ್ರದ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದ್ದ ‘ವಂದೇ ಭಾರತ್’ ಏರ್‌ಲಿಫ್ಟ್ ವಿವಾದಕ್ಕೆ ತೆರೆಬಿದ್ದಿದೆ. ಬಾಂಗ್ಲಾದೇಶದಿಂದ 169 ಭಾರತೀಯ ಪ್ರಜೆಗಳು, ಕೋಲ್ಕತ್ತಾದಲ್ಲಿ ಸೋಮವಾರ ಇಳಿದಿದ್ದಾರೆ. ತುರ್ತು ಚಿಕಿತ್ಸೆಯ ಅವಶ್ಯಕತೆ ಇದ್ದ 16 ರೋಗಿಗಳು, ಒಬ್ಬರು ಗರ್ಭಿಣಿ ತಾಯ್ನಾಡಿಗೆ ಆಗಮಿಸಿದ್ದಾರೆ. ಇದೇ ವೇಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಯಾವುದೇ ವಿಮಾನಗಳನ್ನು ಮೀಸಲಿಡದೆ ಇರುವುದು, ಅಲ್ಲಿನ ಭಾರತೀಯರ ಬೇಸರಕ್ಕೆ ಎಡೆಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.