ಕೋವಿಡ್ ಅಂಕಿಅಂಶ: ಒಂದೇ ದಿನ ದಾಖಲೆಯ 64,399 ಹೊಸ ಪ್ರಕರಣ, 861 ಸಾವು
Team Udayavani, Aug 9, 2020, 10:30 AM IST
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 64,399 ಜನರಿಗೆ ಹೊಸದಾಗಿ ಕೋವಿಡ್ ಸೊಂಕು ತಗುಲಿವೆ. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 21,53,011ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ಭಾರತದಲ್ಲಿ 6,28,747 ಸಕ್ರೀಯ ಪ್ರಕರಣಗಳಿದ್ದು, 14,80,885 ಜನರು ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಅಮೆರಿಕಾ, ಬ್ರೆಜಿಲ್ ಹೊರತುಪಡಿಸಿದರೆ ಭಾರತದಲ್ಲೇ ಅತೀ ಹೆಚ್ಚು ಸೋಂಕಿತರಿದ್ದು ಈವರೆಗೂ 43,379 ಜನರು ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸುಮಾರು 861 ಜನರು ಕೋವಿಡ್ ಕಾರಣದಿಂದ ಮೃತರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3,38,362 ಕ್ಕೆ ಏರಿಕೆಯಾಗಿದ್ದು, 1.47 ಲಕ್ಷ ಸಕ್ರೀಯ ಪ್ರಕರಣಗಳಿವೆ. ತಮಿಳುನಾಡಿನಲ್ಲೂ ಕೂಡ ಒಟ್ಟು ಸೊಂಕಿತರ ಸಂಖ್ಯೆ 2.32 ಲಕ್ಷಕ್ಕೆ ಏರಿಕೆಯಾಗಿದ್ದು, 53,481 ಸಕ್ರೀಯ ಪ್ರಕರಣಗಳಿವೆ. ದೆಹಲಿಯಲ್ಲಿ 1,29 ಲಕ್ಷ ವೈರಾಣು ಪೀಡಿತರಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 10.667 ಇದೆ.
Single-day spike of 64,399 cases and 861 deaths reported in India, in the last 24 hours.
The #COVID19 tally rises to 21,53,011 including 6,28,747 active cases, 14,80,885 cured/discharged/migrated & 43,379 deaths: Ministry of Health pic.twitter.com/FGm4qSg63m
— ANI (@ANI) August 9, 2020
ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರಪ್ರದೇಶ ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಸೊಂಕಿತರು ಕಳೆದ 24 ಗಂಟೆಗಳಲ್ಲಿ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.