ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು


Team Udayavani, Aug 12, 2020, 7:47 PM IST

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

ಬೆಂಗಳೂರು: ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7883 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7034 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 113 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2ಲಕ್ಷದ ಗಡಿಯನ್ನು ಸಮೀಪಿಸಿದ್ದು, 1,96,494ಕ್ಕೆ ಏರಿಕೆಯಾಗಿದೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,12,633 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 80,343 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3510 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 701 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2802 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (635), ಮೈಸೂರು (544), ಬೆಳಗಾವಿ (304), ಧಾರವಾಡ (269), ಉಡುಪಿ (263), ಹಾಸನ (258), ದಾವಣಗೆರೆ (239), ದಕ್ಷಿಣ ಕನ್ನಡ (229), ಕೊಪ್ಪಳ (202), ರಾಯಚೂರು (191), ಬೆಂಗಳೂರು ಗ್ರಾಮಾಂತರ (182), ಬಾಗಲಕೋಟೆ (170), ಗದಗ (148), ಕಲಬುರಗಿ (144), ಹಾವೇರಿ (132), ವಿಜಯಪುರ (121), ಮಂಡ್ಯ (121), ತುಮಕೂರು (121), ಚಿಕ್ಕಮಗಳೂರು (112) ಮತ್ತು ಯಾದಗಿರಿ (107) ಜಿಲ್ಲೆಗಳಿವೆ.

ಇನ್ನುಳಿದಂತೆ, ಬೀದರ್ (91), ಉತ್ತರ ಕನ್ನಡ (84), ಚಿಕ್ಕಬಳ್ಳಾಪುರ (81), ಶಿವಮೊಗ್ಗ (69), ಚಾಮರಾಜನಗರ (68), ರಾಮನಗರ (63), ಚಿತ್ರದುರ್ಗ (61), ಕೋಲಾರ (33) ಮತ್ತು ಕೊಡಗು (29) ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 26,076 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 27,250 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 53,326 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 4,07,568 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 14,18,749 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 18,26,317 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Yemeni President approves hanging of Kerala nurse

Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್‌ ಅಧ್ಯಕ್ಷ ಸಮ್ಮತಿ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

CTR-DGP

Winter Session Issue: ಬಂಧನ, ಪೊಲೀಸ್‌ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು

Court1

Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

courts-s

Sullia; ಆರೋಪಿ ತಾಯಿಯ ಅಪರಾಧ ಸಾಬೀತು; ಜ. 4ರಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.