ಕೋವಿಡ್ ಕಳವಳ-ಆಗಸ್ಟ್ 30: 8852 ಹೊಸ ಪ್ರಕರಣ ; 7101 ಡಿಸ್ಚಾರ್ಜ್ ; 106 ಸಾವು
Team Udayavani, Aug 30, 2020, 8:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಶನಿವಾರ ಸಾಯಂಕಾಲದಿಂದ ರವಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8852 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7101 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 106 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರುವರೆ ಲಕ್ಷದ ಸಮೀಪದಲ್ಲಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,35,928 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2.5ಲಕ್ಷದ ಸನಿಹಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,42,229 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಒಟ್ಟು 86,347 ಸಕ್ರಿಯ ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 5589 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 730 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2821 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.
ಮೈಸೂರು (734), ಬಳ್ಳಾರಿ (428), ದಾವಣಗೆರೆ (373), ಹಾಸನ (268), ಶಿವಮೊಗ್ಗ (292), ಬೆಳಗಾವಿ (357), ದಕ್ಷಿಣ ಕನ್ನಡ (334), ರಾಯಚೂರು (147), ಧಾರವಾಡ (300), ಕಲಬುರಗಿ (166), ಚಿಕ್ಕಮಗಳೂರು (207), ಉಡುಪಿ (254), ಮಂಡ್ಯ (179), ಚಿತ್ರದುರ್ಗ (95), ಉತ್ತರ ಕನ್ನಡ (113), ಕೊಪ್ಪಳ (240), ತುಮಕೂರು (314), ವಿಜಯಪುರ (127), ಬಾಗಲಕೋಟೆ (132), ಹಾವೇರಿ (105), ಗದಗ (196), ಚಿಕ್ಕಬಳ್ಳಾಪುರ (127), ಕೋಲಾರ (82), ರಾಮನಗರ (114), ಯಾದಗಿರಿ (67), ಬೀದರ್ (73), ಚಾಮರಾಜನಗರ (54), ಕೊಡಗು (65) ಮತ್ತು ಬೆಂಗಳೂರು ಗ್ರಾಮಾಂತರ (55) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 26,176 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 40,781 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 66,957 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 8,27,899 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 20,24,776 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 28,52,675 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.