ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ
Team Udayavani, May 26, 2020, 9:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಕೋವಿಡ್ ವೈರಸ್‍ನಿಂದ ಜಿಲ್ಲೆಯ 2 ವರ್ಷದ ಗಂಡುಮಗು ಸೇರಿದಂತೆ 9 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟಿರುವ ಒಟ್ಟು 140 ಪ್ರಕರಣಗಳಲ್ಲಿ ಪ್ರಸ್ತುತ 131 ಪ್ರಕರಣಗಳು ಸಕ್ರಿಯವಾಗಿ ಉಳಿದಿವೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಹಾಪುರ ತಾಲ್ಲೂಕಿನ ಕನ್ಯಾಕೋಳೂರು ಗ್ರಾಮದ 30 ವರ್ಷದ ಪುರುಷ (ಪ್ರಕರಣ ಸಂಖ್ಯೆ ಪಿ-1139), ಶಹಾಪುರ ತಾಲ್ಲೂಕಿನ ಚಂದಾಪುರ ತಾಂಡಾದ 22 ವರ್ಷದ ಪುರುಷ (ಪಿ-1140), ಶಹಾಪುರ ತಾಲ್ಲೂಕಿನ ಕನ್ಯಾಕೋಳೂರು ಗ್ರಾಮದ 34 ವರ್ಷದ ಪುರುಷ (ಪಿ-1141), ಗುರುಮಠಕಲ್ ತಾಲ್ಲೂಕಿನ ಬದ್ದೇಪಲ್ಲಿ ತಾಂಡಾದ 25 ವರ್ಷದ ಮಹಿಳೆ (ಪಿ-1188), ಬದ್ದೇಪಲ್ಲಿ ತಾಂಡಾದ 25 ವರ್ಷದ ಪುರುಷ (ಪಿ-1189), ಬದ್ದೇಪಲ್ಲಿ ತಾಂಡಾದ 20 ವರ್ಷದ ಪುರುಷ (ಪಿ-1190), ಬದ್ದೇಪಲ್ಲಿ ತಾಂಡಾದ 15 ವರ್ಷದ ಯುವಕ (ಪಿ-1191), ಬದ್ದೇಪಲ್ಲಿ ತಾಂಡಾದ 30 ವರ್ಷದ ಪುರುಷ (ಪಿ-1192) ಮತ್ತು ಯಾದಗಿರಿ ತಾಲ್ಲೂಕಿನ ಚಿನ್ನಾಕಾರ ಗ್ರಾಮದ 2 ವರ್ಷದ ಗಂಡುಮಗು (ಪಿ-1256) ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ವೈದ್ಯರು, ತಜ್ಞವೈದ್ಯರು, ಮೈಕ್ರೋಬೈಯಾಲಜಿಸ್ಟ್ ವೈದ್ಯರು ಸ್ವಇಚ್ಛೆಯಿಂದ ಕೋವಿಡ್ ಯೋಧರಾಗಲು ಇಚ್ಛಿಸಿದಲ್ಲಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದೂ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರು ಮಾಹಿತಿ ನೀಡಿದರು.
ಸೋಂಕಿತರು ಗುಣಮುಖರಾಗುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ಖಾಸಗಿ ವೈದ್ಯರು ಹಾಗೂ ಸಿಬ್ಬಂದಿಗಳು ಸೇರಿದಂತೆ ಪ್ರತಿಯೊಬ್ಬರ ಶ್ರಮ ಅಡಗಿದೆ. ಎಲ್ಲರಿಗೂ ಜಿಲ್ಲಾಡಳಿತದಿಂದ ಅಭಿನಂದನೆ ತಿಳಿಸಿದರು.
ಕ್ವಾರಂಟೈನ್ ಕೇಂದ್ರಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳಂತೆ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಿದ ದಿನಾಂಕ ಮತ್ತು ಮುಂಬೈನಿಂದ ಆಗಮಿಸಿದವರ ಮಾದರಿಗಳ ಸಂಗ್ರಹಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ.
ನೆಗೆಟಿವ್ ವರದಿ ಬಂದ ನಂತರ ಬಿಡುಗಡೆ ಮಾಡಿ, ಮನೆಯಲ್ಲಿ ಕೆಲ ದಿನ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ ಎಂದರು.
ಕ್ವಾರಂಟೈನ್ ಕೇಂದ್ರದಲ್ಲಿ 14 ದಿನ ಮುಗಿದರೂ ವರದಿ ಬರುವವರೆಗೂ ಕಾಯಬೇಕು. ಇಲ್ಲವಾದಲ್ಲಿ ಜಿಲ್ಲಾಡಳಿತದ ಪ್ರಯತ್ನ ವ್ಯರ್ಥವಾಗುತ್ತದೆ. ಈ ನಿಟ್ಟಿನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿರುವವರ ಜೊತೆಗೆ ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸುವ ಪ್ರಯತ್ನದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಮನವಿ ಮಾಡಿದರು.
ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದೂ ಜಿಲ್ಲಾಧಿಕಾರಿಯವರು ಇದೇ ಸಂದರ್ಭದಲ್ಲಿ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಡಾ. ಶಂಕರಗೌಡ ಐರೆಡ್ಡಿ, ಐಎಂಎ ಜಿಲ್ಲಾ ಕಾರ್ಯದರ್ಶಿ ವಿರೇಶ ಜಾಕಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.