![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-415x218.jpg)
ಕೋವಿಡ್-19 ಕಳವಳ – ಸೆ.17: 9366 ಹೊಸ ಪ್ರಕರಣ ; 7268 ಡಿಸ್ಚಾರ್ಜ್ ; 93 ಸಾವು
Team Udayavani, Sep 17, 2020, 9:06 PM IST
![Covid-19-2](https://www.udayavani.com/wp-content/uploads/2020/09/Covid-19-2-620x374.jpg)
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಬುಧವಾರ ಸಾಯಂಕಾಲದಿಂದ ಗುರುವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9366 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7268 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 93 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 4,94,356ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 3,83,077 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿಯನ್ನು ತಲುಪಿದೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 1,03,631 ಸಕ್ರಿಯ ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 7629 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 805 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3799 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.
ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ರಾಜಿನಾಮೆ
ಇನ್ನುಳಿದಂತೆ, ಮೈಸೂರು (591), ಬಳ್ಳಾರಿ (677), ದಾವಣಗೆರೆ (257), ಹಾಸನ (206), ಶಿವಮೊಗ್ಗ (218), ಬೆಳಗಾವಿ (295), ದಕ್ಷಿಣ ಕನ್ನಡ (308), ರಾಯಚೂರು (227), ಧಾರವಾಡ (247), ಬಾಗಲಕೋಟೆ (234), ಕಲಬುರಗಿ (175), ಚಿಕ್ಕಮಗಳೂರು (112), ಉಡುಪಿ (120), ಮಂಡ್ಯ (86), ಚಿತ್ರದುರ್ಗ (152), ಉತ್ತರ ಕನ್ನಡ (127), ಕೊಪ್ಪಳ (180), ತುಮಕೂರು (381), ವಿಜಯಪುರ (107), ಹಾವೇರಿ (188), ಗದಗ (69), ಬೆಂಗಳೂರು ಗ್ರಾಮಾಂತರ (66), ಚಿಕ್ಕಬಳ್ಳಾಪುರ (102), ಕೋಲಾರ (115), ರಾಮನಗರ (42), ಯಾದಗಿರಿ (50), ಬೀದರ್ (80), ಚಾಮರಾಜನಗರ (108) ಮತ್ತು ಕೊಡಗು (47) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 32,913 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 39,117 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 72,030 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.
ಇದನ್ನೂ ಓದಿ: ಕೋವಿಡ್ ಹೀರೋಗಳಿಗೆ ಗೌರವ ಸಲ್ಲಿಸಲಿರುವ ಆರ್‌ಸಿಬಿ
ರಾಜ್ಯದಲ್ಲಿ ಇದುವರೆಗೆ ಒಟ್ಟು 14,04,764 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 26,53,549 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 40,58,313 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಟಾಪ್ ನ್ಯೂಸ್
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ](https://www.udayavani.com/wp-content/uploads/2023/04/tdy-2-12-150x90.jpg)
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
![UP government mandates Covid testing for arriving international passengers](https://www.udayavani.com/wp-content/uploads/2023/04/covid-2-150x83.jpg)
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
![mansukh mandaviya](https://www.udayavani.com/wp-content/uploads/2023/04/mansukh-150x83.jpg)
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
![India Sees Single-Day Rise Of Over 1,000 Covid-19 Cases](https://www.udayavani.com/wp-content/uploads/2023/03/covid-2-150x83.jpg)
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
![ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ](https://www.udayavani.com/wp-content/uploads/2023/01/Covid-3-150x99.jpg)
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
![H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ](https://www.udayavani.com/wp-content/uploads/2024/12/VISA-150x84.jpg)
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.