ಸೇವಾಶ್ರಮ ಹಾಗೂ ವೃದ್ಧಾಶ್ರಮಕ್ಕೆ ದಿನಸಿ ವಿತರಿಸಿದ ನಟ ಶ್ರೀಮುರಳಿ ಫ್ಯಾನ್ಸ್
ಅವರು ಆಶ್ರಮದ ವಿದ್ಯಾರ್ಥಿಗಳಿಗೆ ಹಾಗೂ ವೃದ್ಧಾಶ್ರಮದಲ್ಲಿರುವ ಹಿರಿಯ ಜೀವಗಳಿಗೆ ಸಹಾಯ ಮಾಡಿದ್ದಾರೆ.
Team Udayavani, Apr 10, 2020, 3:08 PM IST
ಬೆಂಗಳೂರು: ಕೋವಿಡ್ ಎಂಬ ಸಾಂಕ್ರಾಮಿಕ ರೋಗ ಎಲ್ಲೆಡೆ ಹರಡಿದ್ದು ಗೊತ್ತೇ ಇದೆ. ಇದರಿಂದ ಸಾಕಷ್ಟು ಜನರು ತತ್ತರಿಸಿದ್ದಾರೆ. ಅದರಲ್ಲೂ ದಿನಗೂಲಿ ನೌಕರರ ಸಮಸ್ಯೆ ಹೇಳತೀರದು. ಅಂತಹವರನ್ನು ಗುರುತಿಸುತ್ತಿರುವ ಚಿತ್ರರಂಗದ ಅನೇಕ ಸಂಘ, ಸಂಸ್ಥೆಗಳು, ನಟ, ನಟಿಯರು, ಅವರ ಅಭಿಮಾನಿಗಳು ಹಾಗೂ ನಿರ್ಮಾಪಕರುಗಳು ಆಹಾರ ಸಾಮಗ್ರಿ ವಿತರಿಸುವ ಮೂಲಕ ಅವರ ಸಹಾಯಕ್ಕೆ ಮುಂದಾಗಿದ್ದಾರೆ.
ಈ ನಿಟ್ಟಿನಲ್ಲಿ ನಟ ಶ್ರೀಮುರಳಿ ಅವರ ಅಭಿಮಾನಿ ಬಳಗ ಕೂಡ ಸಹಾಯಕ್ಕೆ ಮುಂದಾಗಿದ್ದು, ಅವರು ಆಶ್ರಮದ ವಿದ್ಯಾರ್ಥಿಗಳಿಗೆ ಹಾಗೂ ವೃದ್ಧಾಶ್ರಮದಲ್ಲಿರುವ ಹಿರಿಯ ಜೀವಗಳಿಗೆ ಸಹಾಯ ಮಾಡಿದ್ದಾರೆ.
ಹೌದು, ತುಮಕೂರು ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿರುವ ಶಿವ ಶೈಕ್ಷಣಿಕ ಸೇವಾ ಆಶ್ರಮದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದು, ಅಲ್ಲಿರುವ ಶಿವಾಶ್ರಮ ಹಿರಿಯ ಪ್ರಾಥಮಿಕ ವಸತಿ ಶಾಲೆಯಲ್ಲಿ ಇರುವ ವಿದ್ಯಾರ್ಥಿಗಳಿಗೆ ಶ್ರೀಮುರಳಿ ಅಭಿಮಾನಿ ಬಳಗ ಅಕ್ಕಿ, ಬೇಳೆ, ಎಣ್ಣೆ, ಸೋಪು ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಿದೆ.
ಅದೇ ಊರಿನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ವೃದ್ಧಾಶ್ರಮಕ್ಕೂ ಭೇಟಿ ನೀಡಿರುವ ಶ್ರೀಮುರಳಿ ಅಭಿಮಾನಿ ಬಳಗದವರು ಅಲ್ಲೂ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಶ್ರೀಮುರಳಿ ಅವರ ಅಭಿಮಾನಿಗಳ ಈ ಮಾನವೀಯತೆ ಕೆಲಸಕ್ಕೆ ಸೇವಾಶ್ರಮದ ಮಕ್ಕಳು ಹಾಗು ಸಾಯಿಬಾಬಾ ವೃದ್ಧಾಶ್ರಮದ ಹಿರಿಯರು ಧನ್ಯವಾದ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.