ಕೋವಿಡ್ 19 ಎಫೆಕ್ಟ್: ಪ್ರಸಕ್ತ ಸಾಲಿನ ಪ್ರಸಿದ್ಧ ಅಮರನಾಥ ಯಾತ್ರೆ ರದ್ದು: ಎಎನ್ ಐ ವರದಿ
ತಾತ್ಕಾಲಿಕ ಶಿಬಿರ, ವೈದ್ಯಕೀಯ ನೆರವು, ಹಿಮಪಾತದ ತೆರವು ತುಂಬಾ ಕಷ್ಟದ ಕೆಲಸವಾಗಲಿದೆ ಎಂದು ತಿಳಿಸಿದೆ.
Team Udayavani, Apr 22, 2020, 7:57 PM IST
Amarnath Yatra
ನವದೆಹಲಿ: ಮಾರಣಾಂತಿಕ ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಈ ವರ್ಷದ ಪ್ರಸಿದ್ಧ ಅಮರನಾಥ ಯಾತ್ರೆಯನ್ನು ರದ್ದುಪಡಿಸಿದೆ ಎಂದು ಎಎನ್ ಐ ವರದಿ ತಿಳಿಸಿದೆ.
ಅಮರನಾಥ ದೇವರ ದರ್ಶನ ಮಾಡಲು ತೆರಳುವ ಕಾಶ್ಮೀರ ಕಣಿವೆಯ 77 ಪ್ರದೇಶಗಳು ರೆಡ್ ಝೋನ್ ಹಾಗೂ ಹಾಟ್ ಸ್ಪಾಟ್ ಗಳಿದ್ದು ಈ ಹಿನ್ನೆಲೆಯಲ್ಲಿ ಬುಧವಾರ ರಾಜಭವನದಲ್ಲಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು, ಅಮರನಾಥ್ ದೇವಾಲಯ ಮಂಡಳಿಯ ಅಧ್ಯಕ್ಷರು ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿರುವುದಾಗಿ ವರದಿ ವಿವರಿಸಿದೆ.
ಕೋವಿಡ್ 19 ಸೋಂಕು ವೇಗವಾಗಿ ಹರಡುತ್ತಿರುವ ವೇಳೆಯಲ್ಲಿ ಯಾತ್ರಾರ್ಥಿಗಳಿಗೆ ತಾತ್ಕಾಲಿಕ ಶಿಬಿರ, ವೈದ್ಯಕೀಯ ನೆರವು, ಹಿಮಪಾತದ ತೆರವು ತುಂಬಾ ಕಷ್ಟದ ಕೆಲಸವಾಗಲಿದೆ ಎಂದು ತಿಳಿಸಿದೆ.
ಕಳೆದ ವರ್ಷ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದರಿಂದ ಅಮರನಾಥ ಯಾತ್ರಾರ್ಥಿಗಳು ತಮ್ಮ ಪವಿತ್ರ ಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿ ವಾಪಸ್ ಆಗಿದ್ದನ್ನು ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.