ಇಂದೋರ್‌ನಲ್ಲಿ ಕೋವಿಡ್ ಸೋಂಕಿಗೆ ವೈದ್ಯ ಸಾವು
ಈ ಹಿಂದೆ ಕೋವಿಡ್ ಮಹಾಮಾರಿಗೆ ಮುಂಬಯಿ ವೈದ್ಯರ ಸಾವಾಗಿತ್ತು
Team Udayavani, Apr 10, 2020, 11:06 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಂದೋರ್‌ನಲ್ಲಿ ಕೋವಿಡ್ 19 ವೈರಸ್ ಸೋಂಕಿತ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಸೋಂಕಿನಿಂದ ವೈದ್ಯ ಮೃತಪಟ್ಟ ಎರಡನೇ ಪ್ರಕರಣ ಇದಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಕಳೆದ 5 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 61 ವರ್ಷದ ಜನರಲ್ ಪಿಜಿಷಿಯನ್ ವೈದ್ಯ ಗುರುವಾರ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಇಂದೋರ್‌ನಲ್ಲಿ ಸೋಂಕಿಗೆ 22 ಮಂದಿ ಬಲಿಯಾಗಿದ್ದು, ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ 26ಕ್ಕೆ ತಲುಪಿದೆ.
ದೇಶದಲ್ಲಿ ಮೊದಲ ಬಾರಿಗೆ ವೈದ್ಯರು ಅಸುನೀಗಿದ್ದು ಮುಂಬಯಿನಲ್ಲಿ. ಮಾ.29ರಂದು 89 ವರ್ಷ ವೈದ್ಯರು ವೈರಸ್‌ನಿಂದ ಅಸುನೀಗಿದ್ದ ಅಂಶವನ್ನು ಬೃಹನ್ಮುಂಬೈ ಮಹಾನಗರ ಪಾಲಿಕೆ ಖಚಿತಪಡಿಸಿತ್ತು. ಈ ನಡುವೆ, ಮೊತ್ತೂಬ್ಬ ವೈದ್ಯ, ಅವರ ಪತ್ನಿ ಸೇರಿದಂತೆ ನಾಲ್ವರಿಗೆ ಸೋಂಕು ಕಾಣಿಸಿಕೊಂಡಿದೆ. ಆತಂಕಕಾರಿ ಸಂಗತಿ ಎಂದರೆ ಭೋಪಾಲ್‌ನಲ್ಲಿ ಸೋಂಕು ಕಂಡು ಬಂದ 90 ಜನರ ಪೈಕಿ 40ಕ್ಕೂ ಹೆಚ್ಚು ಮಂದಿ ಆರೋಗ್ಯ ಸಿಬ್ಬಂದಿಯಾಗಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಬ್ ಇನ್ಸ್ ಪೆಕ್ಟರ್‌ಗೂ ಕೋವಿಡ್ ಸೋಂಕು ತಗುಲಿದೆ.
20 ಹಾಟ್‌ಸ್ಪಾಟ್ ಬಂದ್
ಖ್ಯಾತ ಬೆಂಗಾಲಿ ಮಾರುಕಟ್ಟೆ ಸೇರಿದಂತೆ ಹೊಸದಿಲ್ಲಿಯಲ್ಲಿನ 20 ಕೊರೊನಾ ಹಾಟ್‌ಸ್ಪಾಟ್‌ಗಳನ್ನು ಮುಚ್ಚಲಾಗಿದೆ. ಈ ಪ್ರದೇಶಗಳಲ್ಲಿ ಸಾರ್ವಜನಿಕರ ಓಡಾಟ ನಿಷೇಧಿಸಲಾಗಿದೆ. ಅಲ್ಲದೆ, ಬೆಂಗಾಲಿ ಸ್ವೀಟ್ ಮಾರ್ಟ್‌ನ ಮಹಡಿ ಮೇಲೆ 35 ಮಂದಿ ಕೆಲಸಗಾರರು ಒಟ್ಟಿಗೆ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಾಲಿ ಸ್ವೀಟ್‌ನ ಮಾಲಿಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಅವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.