ಕೊಡಗು ಜಿಲ್ಲೆಯಲ್ಲಿ ಕೋವಿಡ್ ಗೆ ಇಂದು ಮತ್ತೊಂದು ಬಲಿ, ಮೃತರ ಸಂಖ್ಯೆ 26ಕ್ಕೆ ಏರಿಕೆ
Team Udayavani, Sep 10, 2020, 8:20 PM IST
ಕೊಡಗು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಈ ದಿನ ಮತ್ತೊಂದು ಸಾವು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 26ಕ್ಕೇರಿದೆ.
ಮಡಿಕೇರಿ ನಗರದ ಗೌಡ ಸಮಾಜದ ಬಳಿಯ ನಿವಾಸಿ 90 ವರ್ಷದ ಪುರುಷರೊಬ್ಬರು, ಈ ಹಿಂದಿನಿಂದಲೂ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು.ಇವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟು ತಕ್ಷಣವೇ ಅವರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಐ.ಸಿ.ಯು ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು.
ಆದರೇ ಇಂದು ಬೆಳಿಗ್ಗೆ 9.30ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kodagu: ಬ್ಯಾಂಕ್ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ
Madikeri: ಸೋಲಾರ್ ಅಂಗಡಿಯಿಂದ 2.16 ಲಕ್ಷ ರೂ. ಕಳವು: ಆರೋಪಿ ಬಂಧನ
Madikeri: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು
Madikeri: ಬೆಳ್ಳಂಬೆಳಗ್ಗೆ ಕ್ಯಾಂಟೀನ್ ಮೇಲೆ ಕಾಡಾನೆ ದಾಳಿ… ಪಾರಾದ ದಂಪತಿ
Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ