ಒಂದೇ ದಿನ 17 ಕೋವಿಡ್ ಸೋಂಕು ಪ್ರಕರಣ: ಬೆಳಗಾವಿಯಲ್ಲಿ ಹೈ ಅಲರ್ಟ್
Team Udayavani, Apr 16, 2020, 11:35 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಳಗಾವಿ: ಗುರುವಾರ ಒಂದೇ ದಿನ 17 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಕುಂದಾನಗರಿಯಲ್ಲಿ ಇದೀಗ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಏಪ್ರಿಲ್ 17ರ ಶುಕ್ರವಾರದಂದು ಬೆಳಗ್ಗೆ ಹಾಲು ಮತ್ತು ಔಷಧಿ ಮಳಿಗೆಗಳು ಮಾತ್ರವೇ ತೆರೆದಿರುತ್ತವೆ ಎಂದು ಪೊಲೀಸರು ಇದೀಗ ನಗರದೆಲ್ಲೆಡೆ ಮೈಕ್ ಮೂಲಕ ಹೇಳುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ 36 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲೂ ಒಂದೇ ದಿನ 17 ಜನರಲ್ಲಿ ಸೋಂಕು ಪಾಸಿಟಿವ್ ಕಂಡುಬಂದಿರುವುದು ಇದೀಗ ಜಿಲ್ಲಾಡಳಿತದ ನಿದ್ದೆಗೆಡಿಸಿದೆ.
ಈ ಕಾರಣದಿಂದ ಅಗತ್ಯ ವಸ್ತುಗಳಾದ ಹಾಲು ಮತ್ತು ಔಷಧಿ ಮಳಿಗೆಗಳನ್ನು ಹೊರತುಪಡಿಸಿ ಇನ್ನಾವ ಅಂಗಡಿಗಳೂ ತೆರೆಯುವುದಿಲ್ಲ ಎಂದು ನಗರದ ಶಹಾಪುರ ಪ್ರದೇಶದಲ್ಲಿ ಪೊಲೀಸರು ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದ್ದಾರೆ.
ಮತ್ತು ಜನರು ಮನೆಯಲ್ಲೇ ಇರಬೇಕು ಹಾಗೂ ಅನಗತ್ಯವಾಗಿ ಹೊರಗೆ ಬರಬಾರದೆಂದೂ ಸಹ ಪೊಲೀಸರು ಸಾರ್ವಜನಿಕರಿಗೆ ಸೂಚನೆಯನ್ನು ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.