ಕೋವಿಡ್-19 ಭೀತಿ: ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ಜುಲೈ 31 ರವರೆಗೂ ವಿಸ್ತರಣೆ
Team Udayavani, Jun 25, 2020, 8:04 AM IST
ಕೊಲ್ಕತ್ತಾ: ಕೋವಿಡ್ ವೈರಸ್ ನಿಯಂತ್ರಣಕ್ಕೆ ತರಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಜುಲೈ 31 ರವರೆಗೂ ವಿಸ್ತರಿಸಿದ್ದಾರೆ. ಈಗಾಗಲೇ ಘೋಷಣೆಯಲ್ಲಿರುವ ಲಾಕ್ ಡೌನ್ ಜೂನ್ 30ಕ್ಕೆ ಮುಕ್ತಾಯಗೊಳ್ಳಲಿದೆ.
3 ಗಂಟೆ ನಡೆದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರ ಹೊರಡಿಸಲಾಗಿದೆ. ಕೋವಿಡ್ 19 ವೈರಸ್ ಸಾಮೂದಾಯಿಕವಾಗಿ ಹರಡಲು ತೊಡಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜುಲೈ 31 ರವರೆಗೂ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೆಲವೊಂದು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಶಾಲಾ ಕಾಲೇಜು ಕೂಡ ಜುಲೈ 31 ರವರೆಗೂ ಮುಚ್ಚಿರುತ್ತವೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಸಂಬಂಧ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಆದರೆ ಅಂತಿಮವಾಗಿ ಜುಲೈ ತಿಂಗಳಾಂತ್ಯದವರೆಗೆ ಲಾಕ್ ಡೌನ್ ಮುಂದುವರೆಸಲು ತೀರ್ಮಾನಿಸಲಾಯಿತು ಎಂದು ಮಾಧ್ಯಮದ ವರದಿ ತಿಳಿಸಿದೆ
ಪಶ್ಚಿಮ ಬಂಗಾಳಲದಲ್ಲಿ 24 ಗಂಟೆಯಲ್ಲಿ 445 ಹೊಸ ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 15,173ಕ್ಕೆ ಏರಿಕೆಯಾಗಿದೆ. ಮೃತರ ಪ್ರಮಾಣ 591 ಕ್ಕೆ ಏರಿಕೆಯಾಗಿದ್ದು, 4,890 ಸಕ್ರೀಯ ಪ್ರಕರಣಗಳಿವೆ.
ದೇಶದಲ್ಲಿ ಕೋವಿಡ್ ವೈರಸ್ ಹರಡುವ ಪ್ರಮಾಣ ಕೂಡ ಹೆಚ್ಚಾಗಿದ್ದು ಪ್ರತಿನಿತ್ಯ 15 ಸಾವಿರಕ್ಕಿಂತ ಹೆಚ್ಚು ಹೊಸ ಸೋಂಕಿತರು ಕಂಡುಬರುತ್ತಿದ್ದಾರೆ. ಸಾವಿನ ಪ್ರಮಾಣ ಕೂಡ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಹಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.