ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು
ಉಭಯ ದೇಶಗಳು ವರ್ಚುವಲ್ ಸಭೆ ಮೂಲಕ ಮಾತುಕತೆ ನಡೆಸಲಿದೆ ಎಂದು ವರದಿ ವಿವರಿಸಿದೆ.
Team Udayavani, Apr 19, 2021, 3:42 PM IST
ನವದೆಹಲಿ:ಭಾರತದಲ್ಲಿ ರೂಪಾಂತರಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ನೀಡುವುದನ್ನು ರದ್ದುಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ದ್ವಿಪಕ್ಷೀಯ ಸಂಬಂಧದ ಬಗ್ಗೆ ಏಪ್ರಿಲ್ ತಿಂಗಳಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ವರ್ಚುವಲ್ (ವಿಡಿಯೋ ಕಾನ್ಫರೆನ್ಸ್) ಸಭೆ ನಡೆಸಿ ಮಾತುಕತೆ ನಡೆಸುವುದಾಗಿ ಜಾನ್ಸನ್ ತಿಳಿಸಿದ್ದಾರೆ.
ಭಾರತದಲ್ಲಿನ ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಏಪ್ರಿಲ್ 25ರ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಉಭಯ ದೇಶಗಳು ವರ್ಚುವಲ್ ಸಭೆ ಮೂಲಕ ಮಾತುಕತೆ ನಡೆಸಲಿದೆ ಎಂದು ವರದಿ ವಿವರಿಸಿದೆ.
ಭಾರತ ಮತ್ತು ಬ್ರಿಟನ್ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಪೂರ್ಣಪ್ರಮಾಣದಲ್ಲಿ ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಬೋರಿಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಸಭೆ ಮೂಲಕ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಆರಿಂದಾಮ್ ಬಾಗ್ಚಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.