ಕೋವಿಡ್ ಸೋಂಕು: ದೇಶಾದ್ಯಂತ 20 ಲಕ್ಷ ಸುರಕ್ಷಾ ಮಳಿಗೆ ತೆರೆಯಲು ಕೇಂದ್ರದ ಚಿಂತನೆ
Team Udayavani, Apr 13, 2020, 6:15 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್ ಸೋಂಕು ಹರಡುವಿಕೆ ತಡೆಗೆ ನಿರ್ಬಂಧಗಳನ್ನು ವಿಸ್ತರಿಸುತ್ತಿರುವ ಕಾರಣ ಜನರು ಅಗತ್ಯ ವಸ್ತುಗಳಿಗೆ ಪರದಾಡುವುದನ್ನು ತಪ್ಪಿಸಲು ದೇಶಾದ್ಯಂತ 20 ಲಕ್ಷ ಸುರಕ್ಷಾ ಮಳಿಗೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, 50ಕ್ಕೂ ಹೆಚ್ಚು ಕಂಪನಿಗಳ ಜೊತೆ ಮಾತುಕತೆ ನಡೆಸಿದೆ.
“ದೇಶದಲ್ಲಿ ಕಿರಾಣಿ ಅಂಗಡಿಗಳ ರೀತಿಯಲ್ಲಿ ಸುರಕ್ಷಾ ಮಳಿಗೆಗಳನ್ನು ತೆರೆದು ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳೊಂದಿಗೆ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಲಾಗುವುದು. ಈ ಕುರಿತು ನಿಯಮಾವಳಿಗಳನ್ನು ರೂಪಿಸುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ಮೂಲಕ ಕೈ ತೊಳೆದು ಬರುವಂತೆ ಸೂಚಿಸಲಾಗುವುದು. ಅಂಗಡಿ ಬಳಿ ಜನರು ಮುಟ್ಟುವ, ಒಡಾಡುವ ಸ್ಥಳಗಳನ್ನು ದಿನಕ್ಕೆ ಎರಡು ಬಾರಿ ಸ್ವಚ್ಛಗೊಳಿಸಲಾಗುವುದು.
ಸಿಬ್ಬಂದಿ ಕೂಡ ಮಾಸ್ಕ್, ಗ್ಲೌಸ್ ಬಳಸುವಂಥ ವ್ಯವಸ್ಥೆ ಇರಲಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ಸುರಕ್ಷತಾ ಸ್ಟೋರ್ ಸ್ಥಾಪಿಸಲಾಗುವುದು. ಈ ಕುರಿತು ಅಗತ್ಯ ವಸ್ತುಗಳ ಸರಬರಾಜು ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗಿದೆ” ಎಂದು ಆಹಾರ ಹಾಗೂ ನಾಗರಿಕ ಸರಬರಾಜು ಸಚಿವಾಲಯದ ಕಾರ್ಯದರ್ಶಿ ಪವನ್ ಕುಮಾರ್ ಅಗರ್‌ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.