ಚಿತ್ರದುರ್ಗ: ಇಂದು 381 ಜನರಿಗೆ ಕೋವಿಡ್ ಪಾಸಿಟಿವ್, ಸೋಂಕಿತರ ಸಂಖ್ಯೆ 8,673ಕ್ಕೆ ಏರಿಕೆ
Team Udayavani, Oct 9, 2020, 7:39 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 381 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,673ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 203 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 1389 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 381 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 8,673ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8,207 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 959 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 75,394 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 74,561 ಜನರ ಮಾದರಿ ಸಂಗ್ರಹಿಸಲಾಗಿದ್ದು, 65,350 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 61 ಜನರ ವರದಿ ಬರುವುದು ಬಾಕಿ ಇದೆ. 477 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.