ಭಾರತದಲ್ಲಿ ಕೋವಿಡ್-19 ವೈರಸ್ ಸಮುದಾಯ ಹಂತಕ್ಕೆ ಪಸರಿಸುತ್ತಿದೆ: ಐಎಂಎ
Team Udayavani, Jul 19, 2020, 8:04 AM IST
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 34 ಸಾವಿರ ಕೋವಿಡ್ ಹೊಸ ಪ್ರಕರಣಗಳು ಕಾಣಿಸಿಕೊಂಡಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 10.38 ಲಕ್ಷಕ್ಕೆ ತಲುಪಿದೆ. ಇದೀಗ ದೇಶದಲ್ಲಿ ಕೋವಿಡ್ ವೈರಸ್ ಸಮೂದಾಯ ಹಂತಕ್ಕೆ ಪಸರಿಸಲು ಆರಂಭಿಸಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಮಾಧ್ಯಮಕ್ಕೆ ತಿಳಿಸಿದೆ.
ಪ್ರತಿ ದಿನ ದೇಶದಲ್ಲಿ 30 ಸಾವಿರಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿದೆ. ಇದೊಂದು ಆಘಾತಕಾರಿ ಬೆಳವಣಿಗೆಯಾಗಿದೆ. ಹಲವಾರು ಅಂಶಗಳು ಇದಕ್ಕೆ ಕಾರಣವಾಗಿದ್ದರೂ, ವೈರಸ್ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಪರಿಸ್ಥಿತಿ ವಿಷಮಿಸಿದೆ ಎಂಬರ್ಥ ನೀಡುತ್ತದೆ. ಇದೊಂದು ಕೆಟ್ಟ ಸಂಕೇತವಾಗಿದ್ದು, ವೈರಸ್ ಸಮೂದಾಯ ಹಂತಕ್ಕೆ ಹರಡುತ್ತಿದೆ ಎಂದು ಐಎಂಎ ಆಸ್ಪತ್ರೆ ಮಂಡಳಿ ಅಧ್ಯಕ್ಷರಾದ ಡಾ. ವಿ ಕೆ ಮೋಂಗಾ ತಿಳಿಸಿದ್ದಾರೆ.
ಆದರೆ ಕೇಂದ್ರ ಆರೋಗ್ಯ ಸಚಿವಾಲಯ ಭಾರತದಲ್ಲಿ ಇನ್ನೂ ಕೋವಿಡ್ -19 ರ ಸಮುದಾಯ ಹಂತಕ್ಕೆ ಪಸರಿಸಿಲ್ಲ ಎಂದು ಹೇಳಿಕೆ ನೀಡಿತ್ತು. ಆದರೆ ಬೆನ್ನಲ್ಲೆ ಐಎಂಐ ಸೇರಿದಂತೆ ಹಲವಾರು ಆರೋಗ್ಯ ತಜ್ಞರು ಇದನ್ನು ಬಲವಾಗಿ ಪ್ರಶ್ನಿಸಿದ್ದಾರೆ.
ಅಮೆರಿಕಾ ಮತ್ತು ಬ್ರೆಜಿಲ್ ನಂತರ ಭಾರತವು ಈಗ ವಿಶ್ವದಲ್ಲೇ ಮೂರನೇ ಅತಿ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ಹೊಂದಿದೆ ಎಂಬ ವಾಸ್ತವದ ಹೊರತಾಗಿಯೂ ಸರ್ಕಾರ ಸಮುದಾಯ ಹಂತಕ್ಕೆ ಹರಡಿಲ್ಲ ಎನ್ನುವುದು ಪ್ರಶ್ನಾರ್ಹ. ಈಗ ಕೋವಿಡ್ -19 ವೈರಸ್ ಪಟ್ಟಣಗಳು ಮತ್ತು ಹಳ್ಳಿಗಳಿಗೆ ನುಗ್ಗುತ್ತಿವೆ. ಇದು ಪರಿಸ್ಥಿತಿಯನ್ನು ನಿಯಂತ್ರಿಸಲು ತುಂಬಾ ಕಷ್ಟಕರವಾಗಲಿದೆ ಎಂದು ಐಎಂಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
Maha Kumbh; ಜಾಗ ಕೇಳಿದರೆ ಹುಷಾರ್: ವಕ್ಫ್ ಬೋರ್ಡ್ಗೆ ಎಚ್ಚರಿಕೆ ನೀಡಿದ ಯೋಗಿ
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.