ವಿಶ್ವಾದ್ಯಂತ ಏರುಗತಿಯಲ್ಲಿ ಸೋಂಕು ಪ್ರಮಾಣ; 6 ಲಕ್ಷ ದಾಟಿದ ಸಾವಿನ ಸಂಖ್ಯೆ
Team Udayavani, Jul 20, 2020, 6:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ/ಜೊಹಾನ್ಸ್‌ಬರ್ಗ್: ಜಗತ್ತಿನಾದ್ಯಂತ ಸೋಂಕಿನಿಂದ ಅಸುನೀಗಿದವರ ಸಂಖ್ಯೆ 6 ಲಕ್ಷ ದಾಟಿದೆ.
ಅಮೆರಿಕ, ದಕ್ಷಿಣ ಆಫ್ರಿಕಾ, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಸೋಂಕಿನ ಮತ್ತು ಸಾವಿನ ಸಂಖ್ಯೆ ಏರುಗತಿಯಲ್ಲಿದೆ.
ಜಗತ್ತಿನಾದ್ಯಂತ ಸತತ ಎರಡನೇ ದಿನ 2,59, 848 ಕೇಸುಗಳು ದೃಢಪಟ್ಟಿವೆ.
ಅಮೆರಿಕ, ಬ್ರೆಜಿಲ್, ಭಾರತ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚು. ಶುಕ್ರವಾರ 2,37,743 ಪ್ರಕರಣಗಳು ದಾಖಲಾಗಿದ್ದು ಅದೇ ಈವರೆಗಿನ ಗರಿಷ್ಠ ಎನಿಸಿತ್ತು. ಹಾಲಿ ತಿಂಗಳಲ್ಲಿ ಪ್ರತಿ ದಿನ ಸರಾಸರಿ 4,800 ಸಾವಿನ ಪ್ರಕರಣಗಳು ವರದಿಯಾಗಿವೆ.
ಸಾಮುದಾಯಿಕ ಹಂತಕ್ಕೆ ಸೋಂಕು: ದೇಶದಲ್ಲಿ ಸತತವಾಗಿ ನಾಲ್ಕು ದಿನಗಳ ಅವಧಿಯಲ್ಲಿ ದಿನವಹಿ ಸೋಂಕು ಕೇಸುಗಳ ಸಂಖ್ಯೆ 30 ಸಾವಿರಕ್ಕಿಂತ ಹೆಚ್ಚಾಗಿದೆ. ಅದಕ್ಕೆ ಪೂರಕವಾಗಿ ದೇಶದಲ್ಲಿ ಸೋಂಕು ಸಾಮುದಾಯಿಕವಾಗಿ ಹರಡಲು ಶುರುವಾಗಿದೆ ಎಂದು ಇಂಡಿಯನ್ ಮೆಡಿಕಲ್ ಎಸೋಸಿಯೇಷನ್ ಆತಂಕ ವ್ಯಕ್ತಪಡಿಸಿದೆ.
ಒಟ್ಟಾರೆಯಾಗಿ ಹೇಳುವುದಿದ್ದರೆ ದೇಶದಲ್ಲಿ ಸೋಂಕಿನ ಸ್ಥಿತಿ ಉತ್ತಮವಾಗಿಲ್ಲವೆಂದು ಸಂಘಟನೆ ಅಧ್ಯಕ್ಷ ಡಾ|ವಿ.ಕೆ.ಮೋಂಗಾ ‘ANI’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿಯೂ ಸೋಂಕು ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಇದೊಂದು ಆತಂಕ ತರುವ ವಿಚಾರ. ಸಾಮುದಾಯಿಕವಾಗಿ ಸೋಂಕು ಹರಡುತ್ತಿದೆ ಎನ್ನುವುದನ್ನು ಇದು ತೋರಿಸುತ್ತದೆ.
ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಸೋಂಕು ಹರಡುತ್ತದೆ ಎಂದಾದರೆ ಅದನ್ನು ನಿಯಂತ್ರಿಸುವುದು ಕಷ್ಟ. ದಿಲ್ಲಿಯಲ್ಲಿ ಆಂಶಿಕವಾಗಿ ಸೋಂಕು ನಿಯಂತ್ರಿಸಲು ಯಶಸ್ವಿಯಾಗಿದ್ದೇವೆ. ಆದರೆ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗೋವಾ, ಮಧ್ಯಪ್ರದೇಶದ ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ಏನಾಗಿದೆ ಎಂದು ಪ್ರಶ್ನೆ ಮಾಡಿದರು.
7 ಕಂಪೆನಿಗಳಿಂದ ಸಂಶೋಧನೆ
ಜಗತ್ತಿನಲ್ಲಿ ಸೋಂಕಿನ ವಿರುದ್ಧ ಲಸಿಕೆಗಾಗಿ ಸಂಶೋಧನೆಗಳು ಪ್ರಗತಿಯಲ್ಲಿವೆ. ಭಾರತದ ಮಟ್ಟಿಗೆ ಹೇಳುವುದಾದರೆ ಒಟ್ಟು ಏಳು ಕಂಪೆನಿಗಳು ಈ ಪ್ರಯತ್ನದಲ್ಲಿ ತಮ್ಮನ್ನು ತೊಡಗಿಸಿಕೊಂಡಿವೆ.
‘ಭಾರತ್ ಬಯೋಟೆಕ್’, ‘ಸೀರಂ ಇನ್ಸ್ಟಿಟ್ಯೂಟ್’, ‘ಝೈಡಸ್ ಕಾಡಿಲಾ’, ‘ಪನಾಸಿಯಾ ಬಯೋಟೆಕ್’, ‘ಇಂಡಿಯನ್ ಇಮ್ಯುನೊಲಾಜಿಕಲ್ಸ್’, ‘ಮೈನ್ವಾಕ್ಸ್’ ಮತ್ತು ‘ಬಯೋಲಾಜಿಕಲ್-ಇ’ ಎಂಬ ಕಂಪೆನಿಗಳು ದೇಶದ ವಿವಿಧ ಭಾಗಗಳಲ್ಲಿ ಸಂಶೋಧನೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.