ಮೊದಲ ವಿಶ್ವಯುದ್ಧ ಮೀರಿಸಿದ ಅಮೆರಿಕ ; ಭಾರೀ ಪ್ರಮಾಣದಲ್ಲಿ ಏರಿದ ಸೋಂಕು ಸಾವಿನ ಸಂಖ್ಯೆ
Team Udayavani, Jun 18, 2020, 7:09 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀಜಿಂಗ್/ವಾಷಿಂಗ್ಟನ್: ಚೀನದಲ್ಲಿ ಶುರುವಾದ ಕೋವಿಡ್ ವೈರಸ್ ಈಗ ಅಮೆರಿಕದ ವ್ಯವಸ್ಥೆಯನ್ನೇ ತಲೆ ಕೆಳಗೆ ಮಾಡುತ್ತಿದೆ.
ಈಗ ಜಗತ್ತಿನ ಹಲವೆಡೆ ಸೋಂಕಿನ ಎರಡನೇ ಆವೃತ್ತಿ ಶುರುವಾಗಿದೆ ಎಂಬ ಆತಂಕದ ನಡುವೆಯೇ ಜಗತ್ತಿನ ಆಗುಹೋಗುಗಳನ್ನು ನಿಯಂತ್ರಿಸುವ ಛಾತಿಯುಳ್ಳ ಅಮೆರಿಕದಲ್ಲಿ ಸೋಂಕಿನಿಂದಾಗಿ ಅಸುನೀಗಿದವರ ಸಂಖ್ಯೆ ಮೊದಲ ವಿಶ್ವ ಮಹಾಯುದ್ಧದಲ್ಲಿ ಅಸುನೀಗಿದವರಿಗಿಂತ ಹೆಚ್ಚಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಆ ಸಂದರ್ಭದಲ್ಲಿ 1,17,000 ಮಂದಿ ಜೀವ ಕಳೆದುಕೊಂಡಿದ್ದರು. ಸೋಂಕಿನಿಂದಾಗಿ ಅಸುನೀಗಿದವರ ಸಂಖ್ಯೆ 1.19 ಲಕ್ಷವನ್ನು ಮೀರಿಸಿದೆ. ಇದರ ಜತೆಗೆ ಐದು ಪ್ರಾಂತ್ಯಗಳಾಗಿರುವ ಅರಿಜೋನಾ, ಫ್ಲಾರಿಡಾ, ಓಕ್ಲಹಾಮಾ, ಆರೇಗಾನ್, ಟೆಕ್ಸಸ್ಗಳಲ್ಲಿ ಹೊಸತಾಗಿ ದಾಖಲೆ ಪ್ರಮಾಣದಲ್ಲಿ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಸೇನೆ ನಿಯೋಜನೆ
ಮತ್ತೆ ಕೋವಿಡ್ ಸೋಂಕು ಕಾಣಿಸಿಕೊಂಡ ನ್ಯೂಜಿಲೆಂಡ್‌ನಲ್ಲಿ ಗಡಿ ಪ್ರದೇಶಗಳಲ್ಲಿ ಕ್ವಾರಂಟೈನ್ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೇನೆಯನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಪ್ರಧಾನಿ ಜೆಸಿಡಾ ಆರ್ಡೆನ್ ಹಿರಿಯ ಸೇನಾಧಿಕಾರಿಗಳ ಜತೆಗೆ ಚರ್ಚಿಸಿ ನಿರ್ಧಾರ ಪ್ರಕಟಿಸಿದ್ದಾರೆ.
ಚೀನಾದಲ್ಲಿ ರೈಲು, ವಿಮಾನ ಬಂದ್
ಮತ್ತೂಂದೆಡೆ ಚೀನದಲ್ಲಿ 90 ಸಾವಿರ ಮಂದಿಗೆ ಸಾಮೂಹಿಕವಾಗಿ ಸೋಂಕು ಪರೀಕ್ಷೆ ನಡೆಸುತ್ತಿರುವಂತೆಯೇ ರೈಲು, ವಿಮಾನಯಾನವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.
ರಾಜಧಾನಿ ಬೀಜಿಂಗ್‌ನ ಎರಡು ವಿಮಾನ ನಿಲ್ದಾಣಗಳು 1,255 ಸ್ಥಳೀಯ ವಿಮಾನಗಳ ಹಾರಾಟ ರದ್ದು ಮಾಡಿವೆ. ಇದರ ಜತೆಗೆ ರೈಲು ಪ್ರಯಾಣಕ್ಕಾಗಿ ಟಿಕೆಟ್ ಕಾಯ್ದಿರಿಸಿದವರಿಗೆ ಹಣ ವಾಪಸ್ ಮಾಡುವ ಪ್ರಕ್ರಿಯೆಯೂ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.