ಅಮೆರಿಕಾದಿಂದ ಭಾರತಕ್ಕೆ ಬಂತು 545 ಆಕ್ಸಿಜನ್ ಕಾಂನ್ಸಟ್ರೇಟರರ್
Team Udayavani, May 4, 2021, 10:49 AM IST
ಹೊಸದಿಲ್ಲಿ: ಐದನೇ ಬ್ಯಾಚ್‌ನ 545 ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ಅಮೆರಿಕಾದಿಂದ ಭಾರತಕ್ಕೆ ಇಂದು ಬಂದು ತಲುಪಿದೆ.
ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದು, “ಅಮೆರಿಕದಿಂದ 5ನೇ ಹಂತದ ವೈದ್ಯಕೀಯ ಉಪಕರಣಗಳು ಬಂದಿವೆ. 545 ಆಕ್ಸಿಜನ್ ಕಾನ್ಸಂಟ್ರೇಟರ್ ಮಂಗಳವಾರ ಆಗಮಿಸಿದೆ” ಎಂದು ಹೇಳಿದ್ದಾರೆ.
ಶನಿವಾರ ಅಮೆರಿಕದಿಂದ ಭಾರತಕ್ಕೆ 1000 ಆಕ್ಸಿಜನ್ ಸಿಲಿಂಡರ್, ಇತರ ವೈದ್ಯಕೀಯ ಉಪಕರಣಗಳನ್ನು ಹೊತ್ತ ವಿಮಾನ ಆಗಮಿಸಿತ್ತು. ಭಾನುವಾರ 1.25 ಲಕ್ಷ ರೆಮಿಡಿಸಿವಿರ್ ಲಸಿಕೆ ಹೊತ್ತ ವಿಮಾನ ಭಾರತಕ್ಕೆ ಬಂದಿತ್ತು.
ಇದನ್ನೂ ಓದಿ:ಕರ್ಫ್ಯೂ ಮುಂದುವರಿಕೆ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಕಳೆದ ವಾರ ಅಮೆರಿಕದಿಂದ ಎನ್ 95 ಮಾಸ್ಕ್, ಆಕ್ಸಿಜನ್ ಸಿಲಿಂಡರ್ ಹೊತ್ತ ಮೊದಲ ವಿಮಾನ ಭಾರತಕ್ಕೆ ಆಗಮಿಸಿತ್ತು. ಇದುವರೆಗೂ ಒಟ್ಟು 5 ವಿಮಾನಗಳು ದೇಶಕ್ಕೆ ಆಗಮಿಸಿದ್ದು, ತುರ್ತು ಅಗತ್ಯವಿರುವ ವೈದ್ಯಕೀಯ ಉಪಕರಣಗಳ ವ್ಯವಸ್ಥೆಯನ್ನು ಅಮೆರಿಕ ಮಾಡಿದೆ.
ಭಾರತಕ್ಕೆ ವೈದ್ಯಕೀಯ ಸಲಕರಣೆಗಳನ್ನು ಹೊತ್ತು ಸಾಗಬೇಕಿರುವ ಎರಡು ವಿಮಾನಗಳು ತಾಂತ್ರಿಕ ಕಾರಣದಿಂದ ತಡವಾಗಿವೆ. ಬುಧವಾರ ಅವು ದೇಶವನ್ನು ತಲುಪುವ ನಿರೀಕ್ಷೆ ಇದೆ ಎಂದು ಅಮೆರಿಕದ ರಕ್ಷಣಾ ಇಲಾಖೆ ಹೇಳಿದೆ.
ಇದನ್ನೂ ಓದಿ: ಪರೀಕ್ಷೆಗೊಳಪಟ್ಟ ಮೂವರಲ್ಲಿ ಒಬ್ಬರಿಗೆ ಸೋಂಕು! ಪಟ್ಟಿಯಲ್ಲಿ ಮೊದಲ ಸ್ಥಾನದತ್ತ ಕರ್ನಾಟಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.