ತಬ್ಲೀಘಿಯಿಂದಾಗಿ ಪ್ರಕರಣ ದ್ವಿಗುಣ : ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ
ಸರಾಸರಿ 4 ದಿನಗಳಿಗೆ ದುಪ್ಪಟ್ಟಾಗುತ್ತಿದೆ ಕೋವಿಡ್ 19 ಸೋಂಕು ಪ್ರಕರಣ
Team Udayavani, Apr 6, 2020, 6:35 AM IST
ದೇಶದಲ್ಲಿ ಪ್ರಸ್ತುತ ಕೋವಿಡ್ 19 ವೈರಸ್ ಸೋಂಕು ಪ್ರಕರಣಗಳು ಸರಾಸರಿ 4 ದಿನಗಳಿಗೆ ದ್ವಿಗುಣಗೊಳ್ಳುತ್ತಿವೆ. ಒಂದು ವೇಳೆ, ದೆಹಲಿಯ ತಬ್ಲೀಘಿ ಜಮಾತ್ ಧಾರ್ಮಿಕ ಸಮ್ಮೇಳನ ನಡೆಯದೇ ಇರುತ್ತಿದ್ದರೆ, ದ್ವಿಗುಣಗೊಳ್ಳುವಿಕೆಯ ದರವು 7 ದಿನಗಳಾಗಿರುತ್ತಿದ್ದವು.
– ಹೀಗೆಂದು ಹೇಳಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಬ್ಲೀಘಿ ಜಮಾತ್‌ನಲ್ಲಿ ಭಾಗವಹಿಸಿದ್ದ ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ದೃಢವಾಗಿದೆ.
ಆ ಕಾರ್ಯಕ್ರಮದಿಂದಾಗಿಯೇ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ. ಸರಾಸರಿ 4 ದಿನಗಳಿಗೆ ಪ್ರಕರಣ ದ್ವಿಗುಣಗೊಳ್ಳುತ್ತಿದೆ. ಭಾನುವಾರದವರೆಗೆ ದೇಶಾದ್ಯಂತ 106 ಮಂದಿ ಮೃತಪಟ್ಟಿದ್ದು, ಸೋಂಕಿ ತರ ಸಂಖ್ಯೆ 4, 041ಕ್ಕೇರಿಕೆಯಾಗಿದೆ. 304 ಮಂದಿ ಗುಣಮುಖರಾಗಿದ್ದಾರೆ ಎಂದು ಹೇಳಿದ್ದಾರೆ.
ಪರಿಹಾರ ಶಿಬಿರಗಳು: ದೇಶಾದ್ಯಂತ 27,661 ಪರಿಹಾರ ಶಿಬಿರಗಳು ಮತ್ತು ವಸತಿ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಈ ಪೈಕಿ 23,924 ಅನ್ನು ಸರ್ಕಾರವೇ ನಿರ್ಮಿಸಿದ್ದರೆ, 3,737 ಅನ್ನು ಸರ್ಕಾರೇತರ ಸಂಸ್ಥೆಗಳು ನಿರ್ಮಿಸಿವೆ. ಇವುಗಳಲ್ಲಿ 12.5 ಲಕ್ಷ ಮಂದಿ ಆಶ್ರಯ ಪಡೆಯುತ್ತಿದ್ದಾರೆ.
ಅಲ್ಲದೆ ಸರ್ಕಾರವು 19,460 ಆಹಾರ ಶಿಬಿರಗಳನ್ನು, ಎನ್.ಜಿ.ಒ.ಗಳು 9,509 ಫುಡ್ ಕ್ಯಾಂಪ್‌ಗಳನ್ನು ನಿರ್ಮಿಸಿವೆ ಎಂದು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ. ಜತೆಗೆ ದೇಶಾದ್ಯಂತ ಒಟ್ಟು 75 ಲಕ್ಷಕ್ಕೂ ಅಧಿಕ ಮಂದಿಗೆ ಆಹಾರ ಒದಗಿಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.