ಕೋವಿಡ್ 19: ಜಪಾನ್ ನಲ್ಲಿ ಮೇ ಅಂತ್ಯದವರೆಗೂ ಎಮರ್ಜೆನ್ಸಿ ವಿಸ್ತರಣೆ
ಜಪಾನ್ ನಲ್ಲಿ 15ಸಾವಿರಕ್ಕೂ ಅಧಿಕ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು, 510 ಮಂದಿ ಸಾವನ್ನಪ್ಪಿದ್ದರು.
Team Udayavani, May 4, 2020, 6:39 PM IST
Prime Minister Shinzo Abe
ಟೋಕಿಯೋ:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಮೇ 31ರವರೆಗೆ ಎಮರ್ಜೆನ್ಸಿ(ಲಾಕ್ ಡೌನ್)ಯನ್ನು ಮುಂದುವರಿಸುವುದಾಗಿ ಜಪಾನ್ ವಿತ್ತ ಸಚಿವ ಯಸುಶಿ ನಿಶಿಮುರಾ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ದೇಶದಲ್ಲಿ ಎಮರ್ಜೆನ್ಸಿ ಮುಂದುವರಿಸಲು ಸೋಮವಾರದ ನಂತರ ಸಂಸತ್ ಅನುಮತಿ ಪಡೆಯಲು ನಿರ್ಧರಿಸಿದ್ದು, ಔಪಚಾರಿಕವಾಗಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಎಮರ್ಜೆನ್ಸಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಜಪಾನ್ ನಲ್ಲಿ 15ಸಾವಿರಕ್ಕೂ ಅಧಿಕ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು, 510 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ. ಟೋಕಿಯೋ ಸೇರಿದಂತೆ ಇತರ ಪ್ರದೇಶಗಳಲ್ಲಿ ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುವ ಮೂಲಕ ಹೆಚ್ಚಿನ ಸಮಸ್ಯೆ ಉಂಟು ಮಾಡಿರುವುದಾಗಿ ನಿಶಿಮುರಾ ಈ ಮೊದಲು ತಿಳಿಸಿದ್ದರು.
ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ರಷ್ಯಾ, ಪೆರು ಮತ್ತು ಸೌದಿ ಅರೇಬಿಯಾ ಸೇರಿದಂತೆ 14 ದೇಶಗಳ ಪ್ರವೇಶವನ್ನು ನಿರ್ಬಂಧಿಸಿರುವುದಾಗಿ ಜಪಾನ್ ಪ್ರಧಾನಿ ಶಿಂಜೊ ಅಬೆ ತಿಳಿಸಿದ್ದರು. ಜಪಾನ್ 70 ಕ್ಕೂ ಹೆಚ್ಚು ದೇಶಗಳ ಪ್ರವೇಶವನ್ನು ನಿಷೇಧಿಸಿತ್ತು. ವಿಶ್ವದ ಇತರೆ ಭಾಗಗಳಿಗೂ ವೀಸಾಗಳನ್ನು ಅಮಾನ್ಯಗೊಳಿಸಿ, 14 ದೇಶಗಳನ್ನು ನಿಷೇಧಿತ ಪಟ್ಟಿಗೆ ಸೇರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.