ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 64.65 ಕೋಟಿ ಲಸಿಕಾ ಡೋಸ್ ಗಳ ಪೂರೈಕೆ : ಕೇಂದ್ರ
Team Udayavani, Sep 2, 2021, 11:30 AM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ರಾಷ್ಟ್ರವ್ಯಾಪಿ ಆಗುತ್ತಿರುವ ಲಸಿಕಾ ಅಭಿಯಾನದಡಿಯಲ್ಲಿ ಈವರೆಗೆ 64.65 ಕೋಟಿ ಲಸಿಕಾ ಡೋಸ್ ಗಳನ್ನು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು (ಗುರುವಾರ, ಸಪ್ಟೆಂಬರ್ 2) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.
ಇನ್ನು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಕೇಂದ್ರ ಸರ್ಕಾರದಿಂದ ಪೂರೈಸಲಾದ ಲಸಿಕೆಗಳ ಪೈಕಿ 4.78 ಕೋಟಿ ಲಸಿಕಾ ಡೋಸ್ ಗಳು ಇನ್ನೂ ಬಳಕೆಯಾಗದೆ ಇವೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚುವರಿ ಲಸಿಕೆಗಳು ಇವೆ ಎಂದು ಕೂಡ ತಿಳಿಸಿದೆ.
ಇದನ್ನೂ ಓದಿ : ಜೊತೆ ಜೊತೆಯಲಿ ನನ್ನರಸಿ ರಾಧೆ ಧಾರಾವಾಹಿ Title Tracks ಹಾಡಿದ್ದು ನಾನೇ
ಜನವರಿ 16 ರಿಂದ ಆರಂಭವಾದ ಲಸಿಕಾ ಅಭಿಯಾನದ ಅಡಿಯಲ್ಲಿ 64,65,07,160 ಲಸಿಕಾ ಡೋಸ್ ಗಳನ್ನು ಕೇಂದ್ರದಿಂದ ಪೂರೈಸಲಾಗಿದೆ.
ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಸೋಂಕಿನ ನಿಯಂತ್ರಣ ಮಾಡುವಲ್ಲಿ ಪ್ರಯತ್ನಿಸುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 47,092 ಹೊಸ ಕೋವಿಡ್ 19 ಪ್ರಕರಣಗಳು 35,181 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇನ್ನು, 509 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,89,583ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿಯೂ ಶೇ.1.15ರಷ್ಟು ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.48ಕ್ಕೆ ಏರಿಕೆಯಾಗಿದೆ.
ಪ್ರತಿ ದಿನದ ಪಾಸಿಟಿವಿಟಿ ದರ ಶೇ.2.80ರಷ್ಟಿದ್ದು, ಬುಧವಾರ (ಸೆ.01) ಸಂಜೆ 7ಗಂಟೆವರೆಗೆ ದೇಶದಲ್ಲಿ 69 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಿಲಾಗಿದ್ದು, ಇದರೊಂದಿಗೆ ದೇಶಾದ್ಯಂತ ಒಟ್ಟು 66 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಇದನ್ನೂ ಓದಿ : 60 ದಿನಗಳಲ್ಲಿ ಹೆಚ್ಚಳ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 47 ಸಾವಿರ ಕೋವಿಡ್ ಪ್ರಕರಣ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.