ಕೋವಿಡ್ ಕಳವಳ-ಆಗಸ್ಟ್ 16: 7040 ಹೊಸ ಪ್ರಕರಣ ; 6680 ಡಿಸ್ಚಾರ್ಜ್ ; 124 ಸಾವು

ಒಟ್ಟು ಚೇತರಿಕೆ ಪ್ರಮಾಣ ಒಂದೂವರೆ ಲಕ್ಷದ ಸನಿಹ ; ರಾಜ್ಯದಲ್ಲಿದೆ ಇನ್ನೂ ಒಟ್ಟು 81 ಸಾವಿರ ಸಕ್ರಿಯ ಪ್ರಕರಣಗಳು

Team Udayavani, Aug 16, 2020, 8:30 PM IST

ಕೋವಿಡ್ ಕಳವಳ-ಆಗಸ್ಟ್ 16: 7040 ಹೊಸ ಪ್ರಕರಣ ; 6680 ಡಿಸ್ಚಾರ್ಜ್ ; 124 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಶನಿವಾರ ಸಾಯಂಕಾಲದಿಂದ ಭಾನುವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7040 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6680 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 124 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದ್ದು, ನಮ್ಮಲ್ಲಿ ಒಟ್ಟು 2,26,966 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,41,491 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 81,512 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3947 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 16 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 692 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2131 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (620), ಬೆಳಗಾವಿ (478), ಬಳ್ಳಾರಿ (381), ಕಲಬುರಗಿ (285), ಧಾರವಾಡ (268), ಉಡುಪಿ (237), ಯಾದಗಿರಿ (236), ದಕ್ಷಿಣ ಕನ್ನಡ (229), ದಾವಣಗೆರೆ (218), ಕೊಪ್ಪಳ (211), ರಾಯಚೂರು (183), ತುಮಕೂರು (169), ವಿಜಯಪುರ (158), ಬಾಗಲಕೋಟೆ (156), ಹಾಸನ (145) ಮತ್ತು ಬೀದರ್ (119) ಜಿಲ್ಲೆಗಳಿವೆ.

ಇನ್ನುಳಿದಂತೆ, ಚಿಕ್ಕಬಳ್ಳಾಪುರ (98), ಮಂಡ್ಯ (91), ಕೋಲಾರ (90), ಬೆಂಗಳೂರು ಗ್ರಾಮಾಂತರ (87), ಗದಗ (79), ಹಾವೇರಿ (76), ಚಿತ್ರದುರ್ಗ (71), ಚಿಕ್ಕಮಗಳೂರು (69), ಉತ್ತರ ಕನ್ನಡ (61), ಚಾಮರಾಜನಗರ (36), ರಾಮನಗರ (32), ಕೊಡಗು (25) ಮತ್ತು ಶಿವಮೊಗ್ಗ (1) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 18,352 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 25,274 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 43,626 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 5,08,369 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 15,29,017 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 20,37,386 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 89,811ಕ್ಕೆ ಏರಿಕೆಯಾಗಿದ್ದು, 53,782 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 34,584ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1444 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 14,188 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 8208 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 5817 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 163 ಸಾವು ಸಂಭವಿಸಿದೆ.

ಮೈಸೂರು ಜಿಲ್ಲೆಯಲ್ಲಿ 10535 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 6475 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3756 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 304 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 8873ಕ್ಕೆ ಏರಿಕೆಯಾಗಿದ್ದು ಇವರಲ್ಲಿ 6436 ಸೋಂಕಿತರು ಗುಣಮುಖರಾಗಿದ್ದಾರೆ. 2168 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 267 ಸಾವು ಸಂಭವಿಸಿದೆ. ಬೆಂಗಳೂರು ನಗರ (1444) ಹಾಗೂ ಮೈಸೂರು (304) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.

ಕಲಬುರಗಿಯಲ್ಲಿ ಒಟ್ಟು 8825 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 6691 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 1971 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 163 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 7974 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 5240 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2655 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 79 ಸಾವಿನ ಪ್ರಕರಣಗಳು ದಾಖಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 7654 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4834 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2586 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 234 ಸಾವು ಸಂಭವಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ 7794 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3877 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3796 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 121 ಸಾವು ಸಂಭವಿಸಿದೆ.

ದಾವಣಗೆರೆ ಜಿಲ್ಲೆಯಲ್ಲಿ 5301 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3529 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1644 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 128 ಸಾವು ಸಂಭವಿಸಿದೆ.

ರಾಯಚೂರು ಜಿಲ್ಲೆಯಲ್ಲಿ 5089 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3131 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1901 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 57 ಸಾವು ಸಂಭವಿಸಿದೆ.

ವಿಜಯಪುರ ಜಿಲ್ಲೆಯಲ್ಲಿ 4870 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3780 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1036 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 54 ಸಾವು ಸಂಭವಿಸಿದೆ.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.