ಕೋವಿಡ್ 19 ವೈರಸ್ ಸೋಂಕು ದ್ವಿಗುಣಗೊಳ್ಳುವ ಅವಧಿ ಇಳಿಕೆ ; ಮೊದಲು 3 ದಿನ; ಈಗ 6.2 ದಿನ
ಇದು ಲಾಕ್‌ಡೌನ್ ಎಫೆಕ್ಟ್ ಎಂದ ಕೇಂದ್ರ ಸರಕಾರ
Team Udayavani, Apr 18, 2020, 5:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಸಂಕಷ್ಟದ ನಡುವೆಯೂ ಭರವಸೆಯ ಆಶಾಕಿರಣ ಎಂಬಂತೆ ದೇಶದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಅವಧಿಯು ಕಳೆದೊಂದು ವಾರದಿಂದ 6.2 ದಿನಗಳಿಗೆ ಇಳಿಕೆಯಾಗಿದೆ. ಅದಕ್ಕೂ ಮೊದಲು ಅಂದರೆ ಲಾಕ್ ಡೌನ್ ಘೋಷಣೆಗೂ ಮುನ್ನ ಪ್ರತಿ 3 ದಿನಗಳಿಗೊಮ್ಮೆ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಉಸಿರಾಟದ ಸಮಸ್ಯೆ ಹಾಗೂ ಜ್ವರದಂಥ ಲಕ್ಷಣ ಇರುವ ಜನರನ್ನೂ ಪರೀಕ್ಷೆಗೊಳಪಡಿಸಿದ್ದೂ ಈ ಬೆಳವಣಿಗೆಗೆ ಕಾರಣ. ಅಲ್ಲದೆ ಹೊಸ ಪ್ರಕರಣಗಳ ಪ್ರಮಾಣದಲ್ಲೂ ಶೇ.40ರಷ್ಟು ಇಳಿಕೆಯಾಗಿದೆ ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ವಿಶೇಷವೆಂದರೆ, ರಾಷ್ಟ್ರೀಯ ಸರಾಸರಿಗೆ ಹೋಲಿಸಿದರೆ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಅವಧಿ ಇನ್ನಷ್ಟು ಹೆಚ್ಚಿನ ದಿನಗಳಿಗೆ ಇಳಿಕೆಯಾಗಿದೆ. ಕೇರಳ, ದೆಹಲಿ, ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶಗಳು ಇಂಥ ರಾಜ್ಯಗಳ ಸಾಲಿಗೆ ಸೇರಿವೆ.
ಅಲ್ಲದೆ, ದೇಶದಲ್ಲಿ ಚೇತರಿಕೆ ಕಾಣುತ್ತಿರುವ ಸೋಂಕಿತರ ಸಂಖ್ಯೆಯೂ ಸುಧಾರಿಸಿದೆ. ಗುಣಮುಖರಾದ ರೋಗಿಗಳು ಮತ್ತು ಸಾವಿನ ಸಂಖ್ಯೆಯ ಅನುಪಾತ 80:20ರಷ್ಟಿದ್ದು, ಅನೇಕ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದ ಸ್ಥಿತಿ ಉತ್ತಮವಾಗಿದೆ ಎಂದು ಅಗರ್ವಾಲ್ ಹೇಳಿದ್ದಾರೆ.
4 ವಾರಗಳಾದರೆ ಸಡಿಲಿಕೆ: ಕ್ವಾರಂಟೈನ್ ವಲಯದಲ್ಲಿ ಸತತ 4 ವಾರಗಳ ಕಾಲ ಯಾವುದೇ ದ್ವಿತೀಯ ಪಾಸಿಟಿವ್ ಪ್ರಕರಣ ಪತ್ತೆಯಾಗದೇ ಇದ್ದರೆ, ಅಂಥ ಪ್ರದೇಶದಲ್ಲಿನ ನಿರ್ಬಂಧಗಳನ್ನು ಸಡಿಲಿಸಲಾಗುತ್ತದೆ ಎಂದೂ ಅಗರ್ವಾಲ್ ಹೇಳಿದ್ದಾರೆ.
ಕೊನೆಯ ಸೋಂಕಿತ ವ್ಯಕ್ತಿಯನ್ನು ಐಸೋಲೇಟ್ ಮಾಡಿದ ಹಾಗೂ ಆತನೊಂದಿಗೆ ಸಂಪರ್ಕ ಹೊಂದಿದವರೆಲ್ಲರೂ 28 ದಿನಗಳ ಕಾಲ ನಿಗಾದಲ್ಲಿ ಇದ್ದ ಬಳಿಕ, 14 ದಿನಗಳು ಯಾವುದೇ ಪ್ರಕರಣ ಪತ್ತೆಯಾಗದಿದ್ದರೆ ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
24 ಗಂಟೆಯಲ್ಲಿ 1007 ಪ್ರಕರಣ: ಕೇವಲ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 23 ಮಂದಿ ಸಾವಿಗೀಡಾಗಿದ್ದು, 1,007 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14 ಸಾವಿರದ ಸಮೀಪಕ್ಕೆ ಬಂದಿದ್ದರೆ, ಸಾವಿನ ಸಂಖ್ಯೆ 450 ದಾಟಿದೆ.
ಇದೇ ವೇಳೆ, ಮೇ ತಿಂಗಳ ಮೊದಲ ವಾರದಲ್ಲಿ ದೇಶದ ಸೋಂಕಿತರ ಸಂಖ್ಯೆ ಉತ್ತುಂಗಕ್ಕೇರಲಿದ್ದು, ಅದರ ನಂತರದ ದಿನಗಳಲ್ಲಿ ಈ ಸಂಖ್ಯೆ ಇಳಿಮುಖವಾಗುತ್ತಾ ಸಾಗಲಿದೆ ಎಂದು ಸರಕಾರ ಆಂತರಿಕ ಮೌಲ್ಯಮಾಪನದಿಂದ ತಿಳಿದುಬಂದಿರುವುದಾಗಿ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ, ಮುಂದಿನ ವಾರವು ನಿರ್ಣಾಯಕವಾಗಲಿದೆ ಎಂದೂ ಹೇಳಲಾಗಿದೆ.
ಡಿಸ್ಚಾರ್ಜ್ ಎಲ್ಲಿ ಎಷ್ಟು?
ಅತಿಹೆಚ್ಚು ಸೋಂಕಿತರಿರುವ ರಾಜ್ಯ ಮಹಾರಾಷ್ಟ್ರದಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣವೂ ಹೆಚ್ಚಿದೆ. ಇಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢವಾಗಿದೆ. 300ಕ್ಕೂ ಹೆಚ್ಚು ರೋಗಿಗಳು ಡಿಸ್ಚಾರ್ಜ್ ಆಗಿದ್ದಾರೆ.
ಚೇತರಿಕೆಯ ವಿಚಾರದಲ್ಲಿ ಕೇರಳಕ್ಕೆ 2ನೇ ಸ್ಥಾನ. 390ಕ್ಕೂ ಹೆಚ್ಚು ಸೋಂಕಿತರು ಅಲ್ಲಿದ್ದಾರೆ, 245 ಗುಣಮುಖರಾಗಿದ್ದಾರೆ. ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಕ್ರಮವಾಗಿ 186 ಮತ್ತು 180 ಮಂದಿ ಚೇತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.