![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Apr 30, 2020, 5:47 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದ ವ್ಯಕ್ತಿಗೆ ಮತ್ತೆ ಕರೆ ಮಾಡಿದ ವೈದ್ಯರು ನಿಮಗೆ ಕೋವಿಡ್ ಸೋಂಕು ತಗಲಿದೆ ಎಂದು ತಿಳಿಸಿ ಆಸ್ಪತ್ರೆಗೆ ದಾಖಲಿಸಿಕೊಂಡಿರುವ ಘಟನೆ ಜಲಂಧರ್‌ನಲ್ಲಿ ನಡೆದಿದೆ.
ಜಲಂಧರ್ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದ 25 ವರ್ಷದ ವ್ಯಕ್ತಿಯಲ್ಲಿ ಕೋವಿಡ್ 19 ವೈರಸ್ ಸೋಂಕಿನ ಲಕ್ಷಣಗಳು ಪತ್ತೆಯಾಗಿಲ್ಲವೆಂಬ ಕಾರಣಕ್ಕೆ ವೈದ್ಯರು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದರು ಇದನ್ನು ಕೇಳಿದ ಆತನೂ ಖುಷಿಯಿಂದ ಮನೆಗೆ ಹೋಗಿದ್ದ.
ಬಳಿಕ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಸಂತೋಷ ಹಂಚಿಕೊಂಡ ಕೆಲವೇ ಕೆಲ ಗಂಟೆಗಳ ಬಳಿಕ ವಿಷಯ ತಿಳಿಸಿರುವ ವೈದ್ಯರು, ನಿಮಗೆ ಕೋವಿಡ್ ಸೋಂಕಿರುವುದರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದಾರೆ.
ಆರಂಭದಲ್ಲಿ ಕೋವಿಡ್ ಲಕ್ಷಣ ಪತ್ತೆಯಾಗದಿದ್ದರೂ, ಬಳಿಕ ಬಂದ ವೈದ್ಯಕೀಯ ವರದಿಯಲ್ಲಿ ಈ ವೈರಸ್ ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಈ ಘಟನೆಯ ಲೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಆದೇಶಿಸಲಾಗಿದೆ.
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.