![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 2, 2020, 6:43 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ 20 ದಿನದ ಗಂಡುಮಗುವಿಗೆ ಕೋವಿಡ್ 19 ವೈರಸ್ ಸೋಂಕು ಪತ್ತೆಯಾಗಿದೆ.
ಇದರ ಜತೆಗೆ ಇನ್ನೂ ಐದು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಕಲ್ಯಾಣ್- ದೊಂಬಿವಿಲಿ ಮುನಿಸಿಪಲ್ ಕಾರ್ಪೊರೇಷನ್‌ನ ವೈದ್ಯಾಧಿಕಾರಿ ಡಾ| ರಾಜು ಲವಂಗೆರೆ ತಿಳಿಸಿದ್ದಾರೆ.
ಅವರೆಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು ಈಗಾಗಲೇ ಮಗುವಿನ ತಾಯಿಯಲ್ಲಿಯೂ ಸೋಂಕು ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಚಾಲಕನಿಗೆ ಸೋಂಕು: ಚೆನ್ನೈನಲ್ಲಿ ಸಿಲುಕಿದ್ದ ಐವರನ್ನು ಆ್ಯಂಬುಲೆನ್ಸ್‌ನಲ್ಲಿ ತ್ರಿಪುರಾಕ್ಕೆ ಕರೆದುಕೊಂಡು ಹೋಗಿದ್ದ ಚಾಲಕನಿಗೆ ಕೋವಿಡ್ 19 ವೈರಸ್ ಸೋಂಕು ದೃಢವಾಗಿದೆ.
ತ್ರಿಪುರಾಕ್ಕೆ ತೆರಳುವ ಮೊದಲು ರೋಗಿಗಳಿಗೆ ಮತ್ತು ಚಾಲಕನಿಗೆ ಪರೀಕ್ಷೆ ನಡೆಸಲಾಗಿತ್ತು. ಅವರಿಗೆ ಸೋಂಕು ತಗುಲಿಲ್ಲ ಎಂದು ದೃಢಪಡಿಸಿಕೊಂಡ ಬಳಿಕವೇ ಅವರನ್ನು ಕಳಿಸಲಾಗಿತ್ತು ಎಂದು ತ್ರಿಪುರಾ ಕಾರ್ಯದರ್ಶಿ ರತನ್ ಲಾಲ್ ನಾಥ್ ತಿಳಿಸಿದ್ದಾರೆ.
ಚಾಲಕ ಅವರನ್ನೆಲ್ಲ ಎ. 27ರಂದು ತ್ರಿಪುರಾದ ಉದಯಪುರದಲ್ಲಿ ಬಿಟ್ಟು ವಾಪಸ್ಸಾಗುವಾಗ ಅವರಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ. ಅವರು ಸದ್ಯ ಪಶ್ಚಿಮ ಬಂಗಾಲದ ಸಿಲಿಗುರಿಯಲ್ಲಿ ಇದ್ದಾರೆ.
ಆ್ಯಂಬುಲೆನ್ಸ್ ನಲ್ಲಿದ್ದ ಐವರನ್ನು ಈಗಾಗಲೇ ಪ್ರತ್ಯೇಕ ನಿಗಾದಲ್ಲಿ ಇರಿಸಲಾಗಿದೆ. ಅವರನ್ನು ಪುನಃ ಪರೀಕ್ಷೆಗೆ ಒಳಪಡಿಸಲಾಗಿದೆ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.