ಕೋವಿಡ್ ಹೆಚ್ಚಳಕ್ಕೆ ಮಹಾರಾಷ್ಟ್ರ ತತ್ತರ
Team Udayavani, Mar 21, 2021, 7:30 AM IST
ಒಂದೇ ದಿನ 27 ಸಾವಿರ ಕೇಸು | ಜನನಿಬಿಡ ಪ್ರದೇಶದಲ್ಲಿ ಸೋಂಕು ಪರೀಕ್ಷೆ
ಹೊಸದಿಲ್ಲಿ/ಮುಂಬಯಿ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿನ ಏರಿಕೆಗೆ ನಿಯಂತ್ರಣವೇ ಇಲ್ಲದಂತಾಗಿದೆ. ಶನಿವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 27,126 ಹೊಸ ಪ್ರಕರಣಗಳು ಮತ್ತು 92 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟು ಕೇಸುಗಳ ಸಂಖ್ಯೆ 24.49 ಲಕ್ಷಕ್ಕೆ ಏರಿಕೆಯಾಗಿದೆ.
ಬೃಹನ್ಮುಂಬಯಿ ಮಹಾನಗರ ಪಾಲಿಕೆ, ತನ್ನ ವ್ಯಾಪ್ತಿಯಲ್ಲಿರುವ ಮಾಲ್‌ಗಳು, ಬಸ್‌ನಿಲ್ದಾಣ ಸಹಿತ ಜನರು ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕರಿಗೆ ಸೋಂಕು ಪತ್ತೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಒಟ್ಟು 47 ಸಾವಿರ ಸೋಂಕು ಪತ್ತೆ ಪರೀಕ್ಷೆಗೆ ಪಾಲಿಕೆ ಗುರಿ ಹಾಕಿದೆ.
ಮಹಾರಾಷ್ಟ್ರದಲ್ಲಿ ಲಸಿಕೆ ನೀಡುವ ಕಾರ್ಯಕ್ರಮವೂ ಚುರುಕಾಗಿಯೇ ಮುಂದುವ ರಿದಿದೆ. ಶುಕ್ರವಾರ 1,89,130 ಡೋಸ್ ಲಸಿಕೆ ಹಾಕಲಾಗಿದೆ. ಜ.16ರ ಬಳಿಕ ಇದುವರೆಗೆೆ 40,96,898 ಮಂದಿಗೆ ಲಸಿಕೆ ಹಾಕಲಾಗಿದೆ.
ಆಫ್ಲೈನ್‌ನಲ್ಲಿ ಪರೀಕ್ಷೆ: 10, 12ನೇ ತರಗತಿಯ ವಾರ್ಷಿಕ ಪರೀಕ್ಷೆಗಳನ್ನು ಆಫ್ಲೈನ್ ಮೂಲಕ ನಡೆಸಲು ತೀರ್ಮಾನಿಸಲಾಗಿದೆ. ಅಂದರೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿಯೇ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ತಿಳಿಸಿದ್ದಾರೆ.
ಮತ್ತೆ 40,953 ಕೇಸುಗಳು: ಶುಕ್ರವಾರದಿಂದ ಶನಿವಾರದ ಅವಧಿಯಲ್ಲಿ ದೇಶದಲ್ಲಿ 40,953 ಹೊಸ ಪ್ರಕರಣ ಪತ್ತೆಯಾಗಿದೆ. 188 ಮಂದಿ ಅಸುನೀಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,88, 394ಕ್ಕೆ ಏರಿಕೆಯಾಗಿದೆ ಮತ್ತು ಚೇತರಿಕೆ ಪ್ರಮಾಣ ಶೇ.96.12ಕ್ಕೆ ಕುಸಿದಿದೆ. ಮೂರು ದಿನಗಳ ಅವಧಿಯಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಕೇಸುಗಳು ದೃಢಪಟ್ಟಂತಾಗಿವೆ.
8-10 ತಿಂಗಳು ರಕ್ಷಣೆ: ಗುಲೇರಿಯಾ ಕೊರೊನಾ ಲಸಿಕೆಯಿಂದ 8-10 ತಿಂಗಳ ಕಾಲ ರಕ್ಷಣೆ ಸಿಗಲಿದೆ ಎಂದು ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ. ದೇಶದಲ್ಲಿ ಲಸಿಕೆ ಪಡೆದುಕೊಂಡಿದ್ದ ರಿಂದ ಭಾರೀ ಪ್ರತಿಕೂಲ ಪರಿಣಾಮಗಳು ಕಂಡುಬಂದಿಲ್ಲ ಎಂದಿದ್ದಾರೆ.
ಸಚಿವ ಆದಿತ್ಯ ಠಾಕ್ರೆಗೆ ಸೋಂಕು :
ಮಹಾರಾಷ್ಟ್ರದ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆಗೆ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ” ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿವೆ. ಪರೀಕ್ಷೆಯ ಬಳಿಕ ದೃಢಪಟ್ಟಿದೆ’ ಎಂದು ಬರೆದುಕೊಂಡಿದ್ದಾರೆ.
ಎಂಟು ರಾಜ್ಯಗಳಲ್ಲಿ ಹೆಚ್ಚು: ದಿಲ್ಲಿ ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಂಕು ಏರಿಕೆಯಾಗುತ್ತಿದೆ. ಈ ಪಟ್ಟಿಯಲ್ಲಿ ಕರ್ನಾಟಕ, ತಮಿಳುನಾಡು, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ದಿಲ್ಲಿ ಇದೆ. ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಸೋಂಕು ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಕೇಂದ್ರ ಸರಕಾರ ಹೇಳಿದೆ.
ಮದುವೆಯಂಥ ಕಾರ್ಯಕ್ರಮ ಕಾರಣ: ಸೋಂಕು ಹೆಚ್ಚಳಕ್ಕೆ ಮದುವೆಯಂಥ ಕಾರ್ಯಕ್ರಮಗಳು ಕಾರಣ. ಜನರು ಈಗ ಹೆಚ್ಚಿನ ಎಚ್ಚರಿಕೆ ವಹಿಸುತ್ತಿಲ್ಲ ಎಂದು ನೀತಿ ಆಯೋಗದ ಸದಸ್ಯ ಡಾ| ವಿ.ಕೆ.ಪೌಲ್ ತಿಳಿಸಿದ್ದಾರೆ. ಅದುವೇ ಸೂಪರ್‌ಸ್ಪ್ರೆಡ್ ಆಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.