ಸಾವಿನ ಸಂಖ್ಯೆ 5ಕ್ಕೇರಿಕೆ: 181 ಮಂದಿಗೆ ಕೋವಿಡ್ 19 ಸೋಂಕು

ಮೂವರು ಗುಣಮುಖ ; ರಾಜ್ಯದ ವಿವಿಧೆಡೆ ಹೊಸದಾಗಿ ಆರು ಪ್ರಕರಣ ಪತ್ತೆ

Team Udayavani, Apr 9, 2020, 5:05 AM IST

ಸಾವಿನ ಸಂಖ್ಯೆ 5ಕ್ಕೇರಿಕೆ: 181 ಮಂದಿಗೆ ಕೋವಿಡ್ 19 ಸೋಂಕು

ಬೆಂಗಳೂರು: ಕೋವಿಡ್ 19 ವೈರಸ್‌ ಸೋಂಕಿನಿಂದ ರಾಜ್ಯದಲ್ಲಿ ಮತ್ತೂಬ್ಬ ವ್ಯಕ್ತಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬುಧವಾರ ರಾಜ್ಯದ ವಿವಿಧೆಡೆ ಹೊಸದಾಗಿ ಆರು ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿಗೊಳಗಾಗಿದ್ದವರ ಸಂಖ್ಯೆ 181ಕ್ಕೆ ತಲುಪಿದೆ. ಸೋಂಕಿತರ ಪೈಕಿ ಮೂರು ಮಂದಿ ಬುಧವಾರ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದು ಒಟ್ಟು 28 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯ ಮಾತ್ರವಲ್ಲದೇ ದೇಶದಲ್ಲಿಯೇ ಕೋವಿಡ್ 19ಗೆ ಮೊದಲ ಸಾವು ಸಂಭವಿಸಿದ್ದ ಕಲಬುರಗಿಯಲ್ಲಿಯೇ ಮತ್ತೂಂದು ಸಾವಾಗಿದೆ. ಮೃತ 65 ವರ್ಷದ ವೃದ್ಧ ಕಲಬುರಗಿ ಬಸ್‌ ನಿಲ್ದಾಣದಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದು, ಎ. 4ರಂದು ತೀವ್ರ ಉಸಿರಾಟ ತೊಂದರೆ (ಎಸ್‌ಎಆರ್‌ಐ) ಹಿನ್ನೆಲೆಯಲ್ಲಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸರಕಾರಿ ಕೋವಿಡ್ 19 ಆಸ್ಪತ್ರೆಗೆ ಶಿಫಾರಸು ಮಾಡಿದ ಆಸ್ಪತ್ರೆ ವೈದ್ಯರು ಎ.6ರ ಸಂಜೆ ಕಲಬುರಗಿಯ ಇಎಸ್‌ಐ ಆಸ್ಪತ್ರೆಗೆ ಕಳುಹಿಸಿದ್ದರು. ಕೋವಿಡ್ 19 ಶಂಕೆ ಹಿನ್ನೆಲೆ ವೃದ್ಧನ ಗಂಟಲಿನ ದ್ರಾವಣವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಹಿಸಲಾಗಿತ್ತು. ಆದರೆಚಿಕಿತ್ಸೆ ಫ‌ಲಕಾರಿಯಾಗದೆ ಮಂಗಳವಾರ ಸಾವೀಗಿಡಾಗಿದ್ದರು. ಬುಧವಾರ ಈ ವರದಿ ಬಂದಿದ್ದು, ಅವರಿಗೆ ಕೋವಿಡ್ 19 ಸೋಂಕು ತಗಲಿದ್ದುದು ಖಚಿತಪಟ್ಟಿದೆ. ಬುಧವಾರ ಕಲಬುರಗಿಯಲ್ಲಿ ಇಬ್ಬರಿಗೆ, ಮಂಡ್ಯ, ಬೆಂಗಳೂರು,ಉತ್ತರ ಕನ್ನಡ, ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಸೋಂಕು ದೃಢವಾದ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಪತ್ತೆಗೆ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಅವರೆಲ್ಲರನ್ನೂ ಶಂಕಿತರು ಎಂದು ಗುರುತಿಸಿ ಮನೆ ಮತ್ತು ಆಸ್ಪತ್ರೆಯಲ್ಲಿ ನಿಗಾ ವಹಿಸಲಿದ್ದು ಕಡ್ಡಾಯವಾಗಿ ಎಲ್ಲರಿಗೂ ಸೋಂಕು ಪರೀಕ್ಷೆ ಮಾಡಲಿದೆ.

ಮೂವರು ಗುಣಮುಖರಾಗಿ ಮನೆಗೆ
ಕೋವಿಡ್ 19 ಸೋಂಕಿಗೊಳಗಾಗಿದ್ದವರ ಪೈಕಿ ಉತ್ತರ ಕನ್ನಡದಲ್ಲಿ ಇಬ್ಬರು ಮತ್ತು ಕೊಡಗಿನಲ್ಲಿ ಒಬ್ಬರು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

– ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಪರ್ಕದಿಂದ ಅವಲೋಕನದಲ್ಲಿರುವವರು – 25,971. ಈ ಪೈಕಿ ಸೋಂಕಿತನ ಪ್ರಾಥಮಿಕ ಸಂಪರ್ಕಿತರು -1,561, ದ್ವಿತೀಯ ಸಂಪರ್ಕಿತರು – 6,261
– ಆಸ್ಪತ್ರೆಗೆ ಬುಧವಾರ ದಾಖಲಾದ ಕೋವಿಡ್ 19 ಶಂಕಿತರು – 95, ಬಿಡುಗಡೆಯಾದವರು – 48, ಸದ್ಯ ಆಸ್ಪತ್ರೆಯಲ್ಲಿರುವ ಶಂಕಿತರು ಒಟ್ಟು- 384
– ಬುಧವಾರ ನೆಗೆಟಿವ್‌ ಬಂದ ವರದಿಗಳು- 424. ಪಾಸಿಟಿವ್‌ ಬಂದ ವರದಿಗಳು – 6 ( ಈವರೆಗೂ ಒಟ್ಟಾರೆ ನೆಗೆಟಿವ್‌ – 6,473, ಪಾಸಿಟಿವ್‌ – 181)
– ಶಂಕಿತರ ಪೈಕಿ ಬುಧವಾರ ಸೋಂಕು ಪರೀಕ್ಷೆಗೆ ಸಂಗ್ರಹಿಸಿದ ಗಂಟಲು ದ್ರಾವಣ ಮಾದರಿಗಳು – 516
– ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ 19 ಸೋಂಕಿತರು – 148
– ತುರ್ತು ಸಮಯದಲ್ಲಿ ಆಂಬುಲೆನ್ಸ್ ಲಭ್ಯವಾಗದಿದ್ದಲ್ಲಿ ಓಲಾ/ ಊಬರ್‌ ಸಂಪರ್ಕಕ್ಕೆ – 9154153917/18/19

ಮನೆ- ಮನೆಗೆ ಜನೌಷಧ: ಸದಾನಂದ ಗೌಡ
ಪ್ರಧಾನಮಂತ್ರಿ ಭಾರತೀಯ ಜನೌಷಧ ಪರಿಯೋಜನೆಯ ಜನೌಷಧ ಕೇಂದ್ರಗಳ ಮೂಲಕ ಮನೆ ಮನೆಗೆ ಔಷಧ ಸರಬರಾಜು ಮಾಡುವ ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ. ಅಗತ್ಯ ವಿದ್ದವರು, ಹಿರಿಯ ನಾಗರಿಕರು ಈ ಸೌಲಭ್ಯ ಪಡೆಯಬಹುದು. ಇದಕ್ಕಾಗಿಯೇ “ಜನೌಷ ಧ ಸುಗಮ್‌’ ಆ್ಯಪ್‌ ರೂಪಿಸಲಾಗಿದ್ದು, ಇದರಿಂದ ಸಮೀಪದ ಜನೌಷಧ ಕೇಂದ್ರ, ಲೊಕೇಷನ್‌ ಮ್ಯಾಪ್‌, ಆ ಕೇಂದ್ರದಲ್ಲಿ ತಮಗೆ ಬೇಕಾದ ಔಷಧ ಲಭ್ಯತೆ ವಿವರ ಸಹಿತ ಮಳಿಗೆಯ ದೂರವಾಣಿ ಸಂಖ್ಯೆಯ ಮಾಹಿತಿ ಇರಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.