ಕೋವಿಡ್ ದಿಂದಾಗಿ ಮಕ್ಕಳ ರೋಗ ನಿರೋಧಕ ಶಕ್ತಿ ಕ್ಷೀಣ: ವರದಿ
Team Udayavani, Aug 23, 2020, 4:22 PM IST
ಸಾಂದರ್ಭಿಕ ಚಿತ್ರ
ಲಂಡನ್: ಈ ಹಿಂದೆ ಕೋವಿಡ್ ಸೋಂಕಿನಿಂದ ಬಳಲುವ ವ್ಯಕ್ತಿಯ ಬಹು ಅಂಗಾಂಗಳಿಗೆ ಸೋಂಕು ಹಾನಿಯನ್ನುಂಟು ಮಾಡುತ್ತದೆ. ಅಲ್ಲದೇ ಸೋಂಕಿನಿಂದ ಗುಣಮುಖರಾದ ಬಳಿಕವೂ ಅಂಗಾಂಗಳಿಗೆ ಆದ ಹಾನಿಯಿಂದ ದೀರ್ಘಕಾಲದವರೆಗೆ ಸಮಸ್ಯೆ ಅನುಭವಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದರು.
ಆದರೀಗ ಕೋವಿಡ್‌ನಿಂದ ಬಳಲುವ ಮಕ್ಕಳಲ್ಲಿಯೂ ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ಇದರಿಂದ ಅವರ ರಕ್ತ ನಾಳಗಳಲ್ಲಿ ವಿಪರೀತ ಊತ, ಹೃದಯ ತೊಂದರೆಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು ಎಂದು ವಿಜ್ಞಾನಿಗಳು ನಡೆಸಿದ ಅಧ್ಯಯನದಿಂದ ಕಂಡುಬಂದಿದೆ. ಲಂಡನ್‌ಕಿಂಗ್ಸ್ ಕಾಲೇಜ್ ಸಂಶೋಧಕರು ಈ ಅಧ್ಯಯನ ನಡೆಸಿದ್ದು, “ನೇಚರ್ ಮೆಡಿಸಿನ್’ ನಿಯತಕಾಲಿಕದಲ್ಲಿ ವರದಿ ಪ್ರಕಟವಾಗಿದೆ.
ಕೋವಿಡ್‌ನಿಂದ ಬಳಲುವ ಕೆಲವು ಮಕ್ಕಳಲ್ಲಿ ಅಪರೂಪದ ಕಾಯಿಲೆ ಕಾಣಿಸಿಕೊಳ್ಳಲಿದ್ದು, ಇದನ್ನು “ಪೀಡಿಯಾಟ್ರಿಕ್ ಇನ್‌ಫ್ಲಮೇಟರಿ ಮಲ್ಟಿಸಿಸ್ಟಂ ಸಿಂಡ್ರೋಮ್’ (ಪಿಐಎಂಎಸ್-ಟಿಎಸ್) ಎಂದು ಹೆಸರಿಸಲಾಗಿದೆ. ಈ ಕಾಯಿಲೆ ಮತ್ತು ಕಾವಾಸಾಕಿ ರೋಗದ ಲಕ್ಷಣಗಳಲ್ಲಿ ಸಾಕಷ್ಟು ಸಾಮ್ಯತೆ ಇದೆ ಎಂದು ಸಂಶೋಧಕರು ಹೇಳಿದ್ದಾರೆ. “ಪಿಐಎಂಎಸ್-ಟಿಎಸ್‌ನಿಂದಾಗಿ ರಕ್ತನಾಳಗಳಲ್ಲಿ ವಿಪರೀತ ಊತ ಕಾಣಿಸಿಕೊಂಡು, ಕೆಲವೊಮ್ಮೆ ಹೃದಯಾಘಾತಕ್ಕೂ ಕಾರಣವಾಗುತ್ತದೆ’ ಎಂದೂ ವಿವರಿಸಿದ್ದಾರೆ. “ಪಿಐಎಂಎಸ್-ಟಿಎಸ್‌ನಿಂದಾಗಿ ರಕ್ತನಾಳಗಳಲ್ಲಿ ವಿಪರೀತ ಊತ ಕಾಣಿಸಿಕೊಂಡು, ಕೆಲವೊಮ್ಮೆ ಹೃದಯಾಘಾತಕ್ಕೂ ಕಾರಣವಾಗುತ್ತದೆ’ ಎಂದೂ ವಿವರಿಸಿದ್ದಾರೆ.
ಮಾಸ್ಕ್ ತೊಡಿಸುವ ಗನ್ : ನ್ಯೂಯಾರ್ಕ್: ಇಲ್ಲಿನ ಅಲೆನ್ ಪನ್ ಎಂಬ ವ್ಯಕ್ತಿ ಮಾಸ್ಕ್ ಕುರಿತು ಜಾಗೃತಿ ಮೂಡಿಸಲು ವಿಭಿನ್ನ ಹಾದಿಯೊಂದನ್ನು ಕಂಡುಕೊಂಡಿದ್ದು, ಮಾಸ್ಕ್ ತೊಡಿಸುವ ಗನ್‌ವೊಂದನ್ನು ಸಂಶೋಧಿಸಿದ್ದಾರೆ. ಸದ್ಯ ಕೋವಿಡ್ ತಡೆಯುವಿಕೆ ಮಾಸ್ಕ್ ಅವಶ್ಯವಾಗಿದ್ದು, ಜನರಲ್ಲಿ ಮಾಸ್ಕ್ ಕುರಿತು ಅರಿವು ಮೂಡಿಸಲು ಅಲೆನ್ ಈ ಪ್ರಯತ್ನ ಮಾಡಿದ್ದಾರೆ. ಇನ್ನು ದೂರದಿಂದಲೇ ಶೂಟ್ ಮಾಡಿದರೆ ಮಾಸ್ಕ್ ಎದುರಿಗಿದ್ದವರ ಮುಖಕ್ಕೆ ಹೋಗಿ ಅಂಟಿಕೊಳ್ಳಲಿದ್ದು, ಇದರ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.