2021ರ ಆರಂಭದವರೆಗೂ ಕೋವಿಡ್ ಲಸಿಕೆಗಳನ್ನು ನಿರೀಕ್ಷಿಸಬೇಡಿ: WHO
Team Udayavani, Jul 23, 2020, 8:49 AM IST
ಜಿನಿವಾ: ಜಗತ್ತಿನಲ್ಲಿ ಕೋವಿಡ್ ವಿರುದ್ಧ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸಂಶೋಧಕರು ಉತ್ತಮ ಪ್ರಗತಿ ಸಾಧಿಸುತ್ತಿದ್ದಾರೆ, ಹಲವೆಡೆ ಕೊನೆಯ ಹಂತದ ಪ್ರಯೋಗಗಳು ನಡೆಯುತ್ತಿದ್ದು, ಆದರೆ ಅವುಗಳ ಮೊದಲ ಬಳಕೆಯನ್ನು 2021ರ ಆರಂಭದವರೆಗೆ ನಿರೀಕ್ಷಿಸಲಾಗುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಜ್ಞರು ಬುಧವಾರ ಹೇಳಿದ್ದಾರೆ.
ಜಗತ್ತಿನಲ್ಲಿ ಕೋವಿಡ್ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಪ್ರತಿದಿನ ದಾಖಲೆಯ ಮಟ್ಟದಲ್ಲಿ ಸೊಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ಕೂಡ ನ್ಯಾಯಯುತ ಲಸಿಕೆ ವಿತರಣೆ ಮಾಡಬೇಕೆಂದು ಪಣತೊಟ್ಟಿದೆ. ಏತನ್ಯಧ್ಯೆ ವೈರಸ್ ಹರಡುವುದನ್ನು ತಡೆಗಟ್ಟುವುದು ಕೂಡ ನಮ್ಮ ಮುಖ್ಯ ಕರ್ತವ್ಯ ಎಂದು WHO ತುರ್ತು ಕಾರ್ಯಕ್ರಮದ ಮುಖ್ಯಸ್ಥ ಮೈಕ್ ರಯಾನ್ ತಿಳಿಸಿದ್ದಾರೆ.
ಲಸಿಕೆ ತಯಾರಿಕೆಯಲ್ಲಿ ನಾವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದ್ದೇವೆ, ಹಲವಾರು ಲಸಿಕೆ ಸಂಶೋಧನೆಗಳು ಈಗ 3ನೇ ಹಂತದ ಪ್ರಯೋಗಗಳಲ್ಲಿವೆ ಮತ್ತು ಯಾವುದೂ ವಿಫಲವಾಗಿಲ್ಲ, ಇಲ್ಲಿಯವರೆಗೆ, ಸುರಕ್ಷತೆ ಅಥವಾ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಲಸಿಕೆಗೆ ಪ್ರಾಧ್ಯಾನ್ಯತೆ ನೀಡಲಾಗಿದೆ. 2021ರಲ್ಲಿ ಮೊದಲ ಹಂತದ ಲಸಿಕೆಯನ್ನು ನಿರೀಕ್ಷಿಸಬಹುದು ಎಂದು ರಯಾನ್ ತಿಳಿಸಿದ್ದಾರೆ.
ಈ ಸಾಂಕ್ರಾಮಿಕ ರೋಗದ ಲಸಿಕೆಗಳು ಕೇವಲ ಶ್ರೀಮಂತ-ಬಡವರಿಗೆ ಮಾತ್ರ ಲಭ್ಯವಿರುವುದಿಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಗಳು ಶೀಘ್ರದಲ್ಲಿ ಸಿಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.