ಭಾರತದಲ್ಲೀಗ ಕೋವಿಡ್ 19 ಸೋಂಕು ದ್ವಿಗುಣಗೊಳ್ಳುವ ಪ್ರಮಾಣ 10ದಿನಕ್ಕೆ ಇಳಿಕೆ: ಸಚಿವಾಲಯ
24ಗಂಟೆಯಲ್ಲಿ 491 ಕೋವಿಡ್ 19 ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದಾರೆ.
Team Udayavani, Apr 24, 2020, 6:26 PM IST
Representative Image
ನವದೆಹಲಿ:ಸಕಾಲಕ್ಕೆ ಸರಿಯಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರಿಂದ ಕೋವಿಡ್ 19 ವೈರಸ್ ಹರಡುವುದನ್ನು ಸಮರ್ಥವಾಗಿ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದು, ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರಗಳು ಹೆಚ್ಚಿನ ಗಮನಹರಿಸಬೇಕು ಎಂದು ಕೇಂದ್ರ ಮನವಿ ಮಾಡಿಕೊಂಡಿದೆ.
ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24ಗಂಟೆಗಳಲ್ಲಿ 1684 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ 23,077ಕ್ಕೆ ಏರಿದೆ. 24ಗಂಟೆಯಲ್ಲಿ 491 ಕೋವಿಡ್ 19 ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದಾರೆ. ಒಟ್ಟು ಈವರೆಗೆ ಗುಣಮುಖರಾದವರ ಸಂಖ್ಯೆ 4,748 ಎಂದು ವಿವರಿಸಿದೆ.
ಇತರ ಪ್ರಮುಖ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕಿನ ಹರಡುವಿಕೆ ತೀವ್ರತೆ ಇಳಿಕೆಯಾಗಿದ್ದು, ಸೋಂಕು ದ್ವಿಗುಣಗೊಳ್ಳುವ ಪ್ರಮಾಣ 10ದಿನಕ್ಕೆ ಇಳಿದಿದೆ. ಈ ಮೊದಲು ವೈರಸ್ 3.5ದಿನಗಳಿಗೆ ದ್ವಿಗುಣಗೊಳ್ಳುತ್ತಿತ್ತು. ಕೋವಿಡ್ 19 ಸೋಂಕಿತ ವ್ಯಕ್ತಿಗಳು ಶೇ.20.57ರಷ್ಟು ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದೆ.
ದೇಶಾದ್ಯಂತ 9.45ಲಕ್ಷ ಶಂಕಿತ ಕೋವಿಡ್ 19 ವೈರಸ್ ಸೋಂಕಿತರನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಅಹಮದಾಬಾದ್, ಸೂರತ್, ಹೈದರಾಬಾದ್ ಹಾಗೂ ಚೆನ್ನೈನಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಇನ್ನೂ ನಾಲ್ಕು ಅಂತರ್ ಸಚಿವಾಲಯದ ತಂಡಗಳನ್ನು ರಚಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.