ಜಗತ್ತಿನಾದ್ಯಂತ 1 ಕೋಟಿ ದಾಟಿದ ಕೋವಿಡ್ -19 ಸೋಂಕಿತರ ಸಂಖ್ಯೆ: 5 ಲಕ್ಷ ಮಂದಿ ಬಲಿ

Team Udayavani, Jun 28, 2020, 8:01 AM IST

covid

ನವದೆಹಲಿ: ಜಗತ್ತಿನಾದ್ಯಂತ ಕೋವಿಡ್ 19 ಸೋಂಕಿತರ ಸಂಖ್ಯೆ 10 ಮಿಲಿಯನ್ ಗಡಿ ದಾಟಿದ್ದು 7 ತಿಂಗಳಲ್ಲಿ 5 ಲಕ್ಷ ಕಿಂತ ಹೆಚ್ಚು  ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಈ ಸಾಂಕ್ರಮಿಕ ರೋಗದ ತೀವ್ರತೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಮಾತ್ರವಲ್ಲದೆ ವೈರಸ್ ಗೆ ಲಸಿಕೆ ಲಭ್ಯವಾಗುವರೆಗೂ ಸಾಮಾಜಿಕವಾಗಿ ಅನೇಕ ಕಠಿಣ ನಿಯಮಗಳನ್ನು ಜಾರಿಗೆ ತರುವ ಅನಿವಾರ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಅನೇಕ ದೇಶಗಳಲ್ಲಿ ಸೋಂಕಿನ ಎರಡನೇ ಅಲೆ ಆರಂಭವಾಗಿದ್ದು ಮತ್ತೊಮ್ಮೆ ಲಾಕ್ ಡೌನ್ ಜಾರಿಗೆ ತರಲು ಚಿಂತನೆ ನಡೆಸುತ್ತಿವೆ. ತಜ್ಞರ ಪ್ರಕಾರ ಈ ಸೋಂಕು 2021ರವರೆಗೂ ತನ್ನ ಅಟ್ಟಹಾಸ ಬಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಉತ್ತರ ಅಮೆರಿಕಾ, ಲ್ಯಾಟಿನ್ ಅಮೆರಿಕ ಮತ್ತು ಯುರೋಪ್ ರಾಷ್ಟ್ರಗಳಲ್ಲಿ ತಲಾ 25% ಪ್ರಕರಣಗಳಿದ್ದರೆ, ಏಷ್ಯಾ ಮತ್ತು ಮಧ್ಯಪ್ರಾಚ್ಯ ದೇಶದಲ್ಲಿ  ಕ್ರಮವಾಗಿ 11% ಮತ್ತು 9% .ಸೋಂಕಿತ ಪ್ರಕರಣಗಳನ್ನು ಹೊಂದಿವೆ ಎಂದು ರಾಯಿಟರ್ಸ್ ವರದಿಯಲ್ಲಿ ತಿಳಿಸಲಾಗಿದೆ.

ಸೊಂಕಿತರ ಸಂಖ್ಯೆ 1 ಕೋಟಿ ಗಡಿ ದಾಟುವುದರೊಂದಿಗೆ ಜಗತ್ತಿನಾದ್ಯಂತ 5 ಲಕ್ಷಕ್ಕಿಂತ ಹೆಚ್ಚು ಜನರು ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಕೋವಿಡ 19 ಸೋಂಕು 2019ರ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿತ್ತು. ಇದು ಜನವರಿ 10 2020 ರಂದು ದೃಢವಾಗುವುದರೊಂದಿಗೆ ಅಮೆರಿಕಾ, ರಷ್ಯಾ ಮುಂತಾದ ಹಲವು ರಾಷ್ಟ್ರಗಳಿಗೆ ವ್ಯಾಪಿಸಿ ಹಲವಾರು ಜನರ ಸಾವು ನೋವಿಗೆ ಕಾರಣವಾಗಿದೆ.

ಭಾರತ ಮತ್ತು ಬ್ರೆಜಿಲ್ ನಲ್ಲಿ ಪ್ರತಿನಿತ್ಯ 15 ಸಾವಿರಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಬ್ರೆಜಿಲ್ ನಲ್ಲಿ 13 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದು 57 ಸಾವಿರ ಮಂದಿ ಬಲಿಯಾಗಿದ್ದಾರೆ. ಅಮೆರಿಕಾದಲ್ಲಿ ಈ ವೈರಸ್ ಅಕ್ಷರಶಃ ಅಟ್ಟಹಾಸ ಮೆರೆದಿದ್ದು ಸುಮಾರು 25 ಲಕ್ಚ  ಮಂದಿ ಸೋಂಕಿತರಾಗಿದ್ದಾರೆ, ಅದರ ಜೊತೆಗೆ 1.28 ಲಕ್ಷ ಮಂದಿ ಮೃತಪಟ್ಟಿದ್ದಾರೆ.

ರಷ್ಯಾದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು(6.27 ಲಕ್ಷ)  ಆದರೆ ಇಲ್ಲಿ ಮೃತರ ಪ್ರಮಾಣಕ್ಕೆ ಕಡಿವಾಣ(8,969) ಬಿದ್ದಿದೆ. ಇನ್ನು ಜಾಗತಿಕವಾಗಿ 4ನೇ ಹಾಟ್ ಸ್ಪಾಟ್ ಎನಿಸಿಕೊಂಡ ಭಾರತದಲ್ಲಿ 5.29 ಲಕ್ಷ ಮಂದಿ ವೈರಣುವಿಗೆ ಭಾಧಿತರಾಗಿದ್ದು, 16 ಸಾವಿರಕ್ಕಿಂತ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ಮಾತ್ರವಲ್ಲದೆ ಯುಕೆ, ಸ್ಪೇನ್, ಪೆರು, ಚೀಲಿ, ಇಟಲಿ, ಇರಾನ್, ಮೆಕ್ಸಿಕೋ, ಪಾಕಿಸ್ಥಾನ ದಲ್ಲಿಯೂ ಸೋಂಕಿತರ ಮತ್ತು ಮೃತರ ಪ್ರಮಾಣ ಹೆಚ್ಚಾಗುತ್ತಲೆ ಇದೆ.

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.