ಹಾವೇರಿ: 214 ಕೋವಿಡ್ ಹೊಸ ಪ್ರಕರಣ; 107 ಜನರು ಗುಣಮುಖ
Team Udayavani, Sep 13, 2020, 7:56 PM IST
ಹಾವೇರಿ: ಜಿಲ್ಲೆಯಲ್ಲಿ ಇಂದು 214 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6772 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 130 ಜನರು ಬಲಿಯಾದಂತಾಗಿದೆ. ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 107 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ಒಟ್ಟು 4904 ಜನರು ಚೇತರಿಸಿಕೊಂಡಿದ್ದಾರೆ,
ಇನ್ನೂ ಒಟ್ಟು 1,738 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.
ವಿಜಯಪುರ ಜಿಲ್ಲೆಯಲ್ಲಿ 29 ಜನರಿಗೆ ಸೋಂಕು ದೃಢ-ಓರ್ವ ಸಾವು
ವಿಜಯಪುರದಲ್ಲಿ ಭಾನುವಾರ ಮತ್ತೆ 29 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಸೋಂಕಿತರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲಾಡಳಿತ ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ಕೋವಿಡ್-19 ಆರೋಗ್ಯ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ 29 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7749 ಕ್ಕೆ ಏರಿಕೆಯಾಗಿದೆ.
ಒಬ್ಬರು ಮೃತಪಟ್ಟ ಕಾರಣ ಸೋಂಕಿತ ಮೃತರ ಸಂಖ್ಯೆ 134 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸೋಂಕು ರೋಗದಿಂದ ಗುಣಮುಖರಾಗಿ ಮತ್ತೆ 84 ಜನರು ಮನೆಗೆ ಮರಳಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 7039 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆ, ಆರೈಕೆ ಕೇಂದ್ರ ಹಾಗೂ ಹೋಂ ಐಸೋಲೇಶನ್ ಸೇರಿ 576 ಜನರು ಮಾತ್ರ ಸಕ್ರೀಯ ರೋಗಿಗಳಾಗಿ ಆರೋಗ್ಯ ಸೇವಾ ನಿಗಾದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.