ಕ್ರೀಡಾ ಕ್ಷೇತ್ರಕ್ಕೆ ಭಾರೀ ನಷ್ಟ: ವಿಶ್ವ ಕ್ರೀಡಾ ಉದ್ಯಮಕ್ಕೆ 1.21 ಲಕ್ಷ ಕೋಟಿ ರೂ. ನಷ್ಟ
Team Udayavani, Jun 15, 2020, 12:12 PM IST
ವಾಷಿಂಗ್ಟ್ ನ್: ಕೋವಿಡ್ -19 ಪ್ರಪಂಚದ ಎಲ್ಲ ಕೇತ್ರಗಳನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಇದರಿಂದ ಕ್ರೀಡಾ ಕ್ಷೇತ್ರವು ಹೊರತಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳು ನಡೆಯದೆ ಕ್ರೀಡಾ ಕ್ಷೇತ್ರಕ್ಕೆ ಭಾರೀ ನಷ್ಟ ಉಂಟಾಗಿದೆ. ಕೋವಿಡ್ -19 ಹಿನ್ನೆಲೆಯಲ್ಲಿ ವಿಶ್ವಾದ್ಯಂತ ಲಾಕ್‌ಡೌನ್ ಹೇರಿರುವ ಕಾರಣ ವಿವಿಧ ಕ್ರೀಡಾಕೂಟಗಳು ಮತ್ತು ಅವುಗಳಿಗೆ ಸಂಬಂಧಿಸಿದ ಚಟುವಟಿಕೆಗಳು ನಡೆಯದೆ ವಿಶ್ವ ಕ್ರೀಡಾ ಉದ್ಯಮವು ಸುಮಾರು 1.21 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದೆ.
ಪ್ರಸ್ತುತ ವಿವಿಧ ರಾಷ್ಟ್ರಗಳಲ್ಲಿ ಆರ್ಥಿಕ ಚೇತರಿಕೆ ದೃಷ್ಟಿಯಿಂದ ಕೆಲವೊಂದು ಕ್ರೀಡಾ ಚಟುವಟಿಕೆಗಳನ್ನು ನಿಧಾನವಾಗಿ ಆರಂಭಿಸಲಾಗಿದೆ. ಆದರೆ ಸದ್ಯ ಆರಂಭವಾಗಿರುವ ಎಲ್ಲ ಕ್ರೀಡಾಕೂಟಗಳು ಪ್ರೇಕ್ಷಕರಿಲ್ಲದೆ ನಡೆಯುವುದರಿಂದ ಅವರಿಂದ ಬರುವ ಆದಾಯ ಕುಂಠಿತವಾಗಲಿದೆ. ಕ್ರೀಡಾ ಉದ್ಯಮದ ಆದಾಯದ ಬಹುಪಾಲು ಜಾಹೀರಾತು, ನೇರ ಪ್ರಸಾರ ಮತ್ತು ಕ್ರೀಡೆಗಳಿಗೆ ಸಂಬಂಧಿಸಿದ ವಿವಿಧ ವ್ಯವಹಾರಗಳಿಂದ ಬರುವುದರಿಂದ ಈಗ ಆರಂಭ ಗೊಂಡಿರುವ ಕ್ರೀಡಾ ಚಟುವಟಿಕೆಗಳು ಈ ಕ್ಷೇತ್ರಕ್ಕೆ ಆದಾಯ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಲಿವೆ. ಹಾಗಾಗಿ ಪ್ರೇಕ್ಷಕರಿಂದ ಸಂಗ್ರಹವಾಗುವ ಆದಾಯಕ್ಕಿಂತ ಇತರ ಮೂಲಗಳಿಂದ ಹಣ ಜಮೆ ಮಾಡಲು ವಿವಿಧ ದೇಶಗಳ ಕ್ರೀಡಾ ಆಡಳಿತ ಮಂಡಳಿಗಳು ಯೋಜನೆ ರೂಪಿಸುತ್ತಿವೆ. ಕ್ರೀಡಾ ಮಾಧ್ಯಮಗಳ ವರದಿಯ ಪ್ರಕಾರ, ಕೋವಿಡ್-19 ಪರಿಣಾಮದಿಂದಾಗಿ ಈ ವರ್ಷ ವಿಶ್ವ ಕ್ರೀಡಾ ಉದ್ಯಮಕ್ಕೆ 1.21 ಲಕ್ಷ ಕೋಟಿ ರೂ.ಗಿಂತಲೂ ಅಧಿಕ ನಷ್ಟ ಉಂಟಾಗಿದೆ. ಅಮೆರಿಕಕ್ಕೆ ಕ್ರೀಡಾ ಕ್ಷೇತ್ರದಲ್ಲಿ ಈ ಬಾರಿ 9 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಭಾರತದಲ್ಲಿ ಕ್ರೀಡೆ ಮತ್ತು ಅದಕ್ಕೆ ಸಂಬಂಧಿಸಿದ ಉದ್ಯಮಗಳಿಗೆ 30 ಸಾವಿರ ಕೋಟಿ ರೂ. ನಷ್ಟವಾಗಿದೆ. ತಜ್ಞರ ಪ್ರಕಾರ, ಭಾರತದಲ್ಲಿ ಕ್ರೀಡಾ ವ್ಯವಹಾರ ಮತ್ತು ಮಾರುಕಟ್ಟೆಗೆ ಸಂಬಂಧಿಸಿದಂತೆ 4,700 ಕೋಟಿ ರೂ. ನಷ್ಟ ಸಂಭವಿಸಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.