ಕೋವಿಡ್ 19: ಐಸೋಲೇಶನ್ ವಾರ್ಡ್ ನಲ್ಲಿ ವೈದ್ಯರ ಮೇಲೆ ಹಲ್ಲೆ, ಇಬ್ಬರ ಬಂಧನ
ಯಾವುದೇ ವ್ಯಕ್ತಿ ವೈದ್ಯರ ಮೇಲೆ ಹಲ್ಲೆ ನಡೆಸಿದರೆ ತಕ್ಷಣವೇ ಬಂಧಿಸಿ ಜೈಲಿಗೆ ಕಳುಹಿಸಲಾಗುವುದು.
Team Udayavani, Apr 15, 2020, 8:59 PM IST
Representative Image
ಹೈದರಾಬಾದ್: ಒಸ್ಮಾನಿಯಾ ಜನರಲ್ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು
ಹೈದರಾಬಾದ್ ನಲ್ಲಿ ಬುಧವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಾದ ಮೊಹಮ್ಮದ್ ಅಶ್ಪಾಖ್ ಹಾಗೂ ಮೊಹಮ್ಮದ್ ಅರ್ಷಾದ್ ಅಲಿ ಮೇಲೆ ಐಪಿಸಿ ಹಾಗೂ ಸೋಂಕು ಹರಡುವಿಕೆ ಕಾಯ್ದೆ
1897 ಅನ್ವಯ ಸೆಕ್ಷನ್ 332, 188, 269, 270, 270ರ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ. ಇಬ್ಬರನ್ನು
ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ತಿಳಿಸಿದೆ.
ಪೊಲೀಸ್ ಕಮಿಷನರ್ ಅಂಜನಿ ಕುಮಾರ್ ಪ್ರಕಟಣೆ ನೀಡಿದ್ದು, ಯಾವುದೇ ವ್ಯಕ್ತಿ ವೈದ್ಯರ ಮೇಲೆ ಹಲ್ಲೆ ನಡೆಸಿದರೆ ತಕ್ಷಣವೇ ಬಂಧಿಸಿ
ಜೈಲಿಗೆ ಕಳುಹಿಸಲಾಗುವುದು. ಇಂತಹ ಕಠಿಣ ಸಂದರ್ಭದಲ್ಲಿ ರಾಜ್ಯದ ಯಾವುದೇ ಆಸ್ಪತ್ರೆಯ ವೈದ್ಯರಾಗಲಿ, ವೈದ್ಯ ಸಿಬ್ಬಂದಿಗಳ
ಮೇಲೆ ಯಾವುದೇ ವ್ಯಕ್ತಿ ಹಲ್ಲೆ ನಡೆಸಿದರೆ ಹೈದರಾಬಾದ್ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ನಲ್ಲಿ ಇದ್ದ ವ್ಯಕ್ತಿಯ ಕೋವಿಡ್ 19 ಪರೀಕ್ಷಾ ವರದಿಗಾಗಿ ಕಾಯುತ್ತಿದ್ದ
ಸಂದರ್ಭದಲ್ಲಿ ತಮ್ಮ ಸಹೋದರನ್ನು ಕೂಡಲೇ ಡಿಸ್ ಚಾರ್ಜ್ ಮಾಡುವಂತೆ ಹೇಳಿ ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ
ಮಂಗಳವಾರ ನಡೆದಿತ್ತು. ಈ ವಾರ್ಡ್ ನಲ್ಲಿದ್ದ ಇತರ ಇಬ್ಬರು ರೋಗಿಗಳ ವರದಿ ಪಾಸಿಟಿವ್ ಎಂದು ಬಂದಿತ್ತು ಎಂದು ವರದಿ
ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.