ಚಿತ್ರದುರ್ಗದಲ್ಲಿ ಇಂದು 97 ಜನರಿಗೆ ಕೋವಿಡ್ ದೃಢ, ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆ
Team Udayavani, Aug 30, 2020, 6:59 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 97 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 23, ಹಿರಿಯೂರು-05, ಚಳ್ಳಕೆರೆ-11, ಮೊಳಕಾಲ್ಮುರು-26, ಹೊಸದುರ್ಗ 11 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 21 ಸೇರಿದಂತೆ ಒಟ್ಟು 97 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 792 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 97 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,712 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 863 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 603 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 20,190 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 38,203 ಜನರ ಮಾದರಿ ಸಂಗ್ರಹಿಸಲಾಗಿದ್ದು, 33,999 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1,163 ಜನರ ವರದಿ ಬರುವುದು ಬಾಕಿ ಇದೆ. 431 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.