‘ರೆಮ್‌ಡೆಸಿವಿರ್’ ಔಷಧಿ ಪ್ರಾಯೋಗಿಕ ಬಳಕೆಗೆ ಭಾರತ ಸಿದ್ಧ
Team Udayavani, May 5, 2020, 8:22 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಅಮೆರಿಕ ಸರಕಾರದಿಂದ ಒಪ್ಪಿಗೆ ಪಡೆದಿರುವ ರೆಮ್‌ಡೆಸಿವಿರ್ ಔಷಧಗಳನ್ನು ಪ್ರಾಯೋಗಿಕವಾಗಿ ಬಳಸಲು ಭಾರತ ಸಿದ್ಧವಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ತಿಳಿಸಿದ್ದಾರೆ.
‘ಆ್ಯಂಟಿ ವೈರಲ್ ಗುಣ ಹೊಂದಿರುವ ಈ ಔಷಧದ ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಆಗ್ರಹಿಸಿದೆ. ಭಾರತವೂ ಡಬ್ಲ್ಯು.ಎಚ್.ಒ. ಸಹಯೋಗಿ ರಾಷ್ಟ್ರವಾಗಿರುವುದರಿಂದ ಭಾರತಕ್ಕೆ ಒಂದು ಸಾವಿರ ರೆಮ್ ಡೆಸಿವಿರ್ ಔಷಧಗಳ ಸ್ಯಾಂಪಲ್‌ಗಳನ್ನು ಕಳುಹಿಸಲಾಗಿದೆ.
ಅವುಗಳನ್ನು ಆಯ್ದ ರಾಜ್ಯಗಳ ಆಯ್ದ ನಗರಗಳಲ್ಲಿ ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಲಾಗುತ್ತದೆ. ಈ ನಿಟ್ಟಿನಲ್ಲಿ ಭಾರತದ ಐಸಿಎಂಆರ್ ಹಾಗೂ ಸಿಎಸ್‌ಐಆರ್ ಸಂಸ್ಥೆಗಳು ಕಾರ್ಯೋನ್ಮುಖವಾಗಿವೆ’ ಎಂದಿದ್ದಾರೆ.
‘ದಿಲ್ಲಿ ಮತ್ತು ಮುಂಬಯಿಗಳಲ್ಲಿನ ಜನರು ಲಾಕ್‌ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸದೇ ಇದ್ದ ಹಿನ್ನೆಲೆಯಲ್ಲಿ ಆ ಮಹಾನಗರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳಲು ಕಾರಣವಾಯಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.