ಕೋವಿಡ್ ಹೋರಾಟ; ಸೂಕ್ತ ಸಮಯದ ನಿರ್ಧಾರದಿಂದ ಭಾರತ ಉತ್ತಮ ಸ್ಥಿತಿಯಲ್ಲಿದೆ: ಪ್ರಧಾನಿ
ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿನ ಸಾವಿನ ಪ್ರಮಾಣ ತುಂಬಾ ಕಡಿಮೆಯಾಗಿದೆ.
Team Udayavani, Jul 27, 2020, 7:41 PM IST
ನವದೆಹಲಿ: ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರ ಸಮರ್ಪಕ ನಿರ್ಧಾರ ತೆಗೆದುಕೊಂಡ ಪರಿಣಾಮ ಕೋವಿಡ್ 19 ಸೋಂಕಿನ ವಿರುದ್ಧ ಭಾರತ ಇತರ ದೇಶಗಳಿಗಿಂತ ತುಂಬಾ ಉತ್ತಮವಾಗಿ ಹೋರಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಜುಲೈ27) ವಿಶ್ಲೇಷಿಸಿದ್ದಾರೆ.
ದೇಶದಲ್ಲಿ ಸರಿಯಾದ ಸಂದರ್ಭಕ್ಕೆ ಸಮರ್ಪಕವಾದ ನಿರ್ಧಾರವನ್ನು ತೆಗೆದುಕೊಂಡಿದ್ದರಿಂದಲೇ ಕೋವಿಡ್ 19 ಹೋರಾಟದಲ್ಲಿ ಬೇರೆ ದೇಶಗಳಿಗಿಂತ ನಾವು ಉತ್ತಮವಾಗಿದ್ದೇವೆ ಎಂಬುದಕ್ಕೆ ಇಂದಿನ ಫಲಿತಾಂಶವೇ ಸಾಕ್ಷಿಯಾಗಿದೆ ಎಂದರು.
ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿನ ಸಾವಿನ ಪ್ರಮಾಣ ತುಂಬಾ ಕಡಿಮೆಯಾಗಿದೆ. ಅಷ್ಟೇ ಅಲ್ಲ ಬೇರೆ ದೇಶಗಳಿಗೆ ಹೋಲಿಕೆ ಮಾಡಿದಲ್ಲಿ ನಮ್ಮಲ್ಲಿ ಚೇತರಿಕೆಯ ಪ್ರಮಾಣವೂ ಹೆಚ್ಚಿದೆ ಎಂದು ಪ್ರಧಾನಿ ಹೇಳಿದರು. ಮುಂಬೈ, ಕೋಲ್ಕತಾ ಮತ್ತು ನೋಯ್ಡಾದಲ್ಲಿ ಅತ್ಯಾಧುನಿಕ ಪರೀಕ್ಷಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಪಶ್ಚಿಮಬಂಗಾಳ, ಮಹಾರಾಷ್ಟ್ರ ಹಾಗೂ ಉತ್ತರಪ್ರದೇಶ ಭಾರೀ ಪ್ರಮಾಣದ ಲಾಭ ಪಡೆದಿರುವುದಾಗಿ ತಿಳಿಸಿದರು. ಅತ್ಯಾಧುನಿಕ ಪ್ರಯೋಗಾಲಯದಿಂದ ಪರೀಕ್ಷಾ ಸಾಮರ್ಥ್ಯ ಹೆಚ್ಚಳವಾಗಲಿದೆ. ಭವಿಷ್ಯದಲ್ಲಿ ಈ ಲ್ಯಾಬ್ ಅನ್ನು ಹೆಪಟೈಟೀಸ್ ಬಿ, ಡೆಂಗ್ಯು ಹಾಗೂ ಇತರ ಗಂಭೀರ ಸ್ವರೂಪದ ಖಾಯಿಲೆಗಳ ಪರೀಕ್ಷೆಗೆ ಬಳಸಿಕೊಳ್ಳಬಹುದಾಗಿದೆ ಎಂದು ಪ್ರಧಾನಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.