ಭಾರತ: ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಕೆ, ಸಾವಿನ ಪ್ರಮಾಣ ಹೆಚ್ಚಳ
ಅಧಿಕಾರಿಗಳ ಶಿಫಾರಸ್ಸನ್ನು ಈ ಸಂದರ್ಭದಲ್ಲಿ ಪ್ರಧಾನಿ ಪಡೆಯಲಿದ್ದಾರೆ ಎಂದು ವರದಿ ತಿಳಿಸಿದೆ.
Team Udayavani, May 18, 2021, 9:55 AM IST
ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದೆ. ಆದರೆ ಕಳೆದ 24 ಗಂಟೆಗಳಲ್ಲಿ ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಮಂಗಳವಾರ(ಮೇ 18) ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,63,533 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,329 ಸಾವು ಸಂಭವಿಸಿದೆ. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ. ಕೋವಿಡ್ ಸಂಬಂಧಿತ ಸಾವಿನ ಸಂಖ್ಯೆ 2,78,719ಕ್ಕೆ ಹೆಚ್ಚಳವಾಗಿದೆ ಎಂದು ಹೇಳಿದೆ.
ಭಾರತದಲ್ಲಿ ಈಗ 33, 53,765 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಏತನ್ಮಧ್ಯೆ ಕೋವಿಡ್ 19 ಪಾಸಿಟಿವ್ ಪ್ರಕರಣ ಹೆಚ್ಚಿರುವ ರಾಜ್ಯ ಮತ್ತು ಜಿಲ್ಲೆಗಳ ಆರೋಗ್ಯಾಧಿಕಾರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂವಹನ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಉತ್ತಮ ಮಾರ್ಗೋಪಾಯ, ಮುಂದಿನ ಯೋಜನೆ ಕುರಿತು ಅಧಿಕಾರಿಗಳ ಜತೆ ಪ್ರಧಾನಿ ಚರ್ಚಿಸಲಿದ್ದಾರೆ. ಗ್ರಾಮೀಣ ಮತ್ತು ಸಣ್ಣ ನಗರಗಳಲ್ಲಿ ಕೋವಿಡ್ 19 ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳ ಶಿಫಾರಸ್ಸನ್ನು ಈ ಸಂದರ್ಭದಲ್ಲಿ ಪ್ರಧಾನಿ ಪಡೆಯಲಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.