ಇರಾನ್ : ದಾಖಲೆ ಸಂಖ್ಯೆಯ ಸೋಂಕು
Team Udayavani, Jun 5, 2020, 2:02 PM IST
ಸಾಂದರ್ಭಿಕ ಚಿತ್ರ
ಟೆಹ್ರಾನ್ : ಇರಾನ್‌ನಲ್ಲಿ ಗುರುವಾರ ಒಂದೇ ದಿನ 3,574 ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗುವುದರೊಂದಿಗೆ ಫೆಬ್ರವರಿಯಿಂದೀಚೆಗಿನ ಎಲ್ಲ ದಾಖಲೆಗಳು ಮುರಿದಿವೆ. ಇರಾನ್‌ನಲ್ಲಿ ಮೊದಲ ಸೋಂಕು ದೃಢವಾದದ್ದು ಫೆಬ್ರವರಿಯಲ್ಲಿ. ಅನಂತರ ಮಾ.30ರಂದು ಒಂದೇ ದಿನ 3,186 ಸೋಂಕಿನ ಪ್ರಕರಣಗಳು ಪತ್ತೆಯಾದದ್ದು ಇಷ್ಟರ ತನಕದ ದಾಖಲೆಯಾಗಿತ್ತು. ಕಳೆದ ನಾಲ್ಕು ದಿನಗಳಲ್ಲಿ ಸತತವಾಗಿ ಸರಾಸರಿ 3,000ದಂತೆ ಹೊಸ ಸೋಂಕಿತರು ಪತ್ತೆಯಾಗುತ್ತಿದ್ದಾರೆ.
ಲಾಕ್‌ಡೌನ್ ಸಡಿಲಿಸಿದ ಬಳಿಕ ಇರಾನ್‌ನಲ್ಲಿ ಸೋಂಕು ಕಾಳ್ಗಿಚ್ಚಿನಂತೆ ಹರಡುತ್ತಿದೆ. ಆದರೆ ಸರಕಾರ ಇದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಪರೀಕ್ಷೆಗಳು ಹೆಚ್ಚಿದ ಕಾರಣ ಪೊಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಗ್ಯ ಇಲಾಖೆ ಸಮರ್ಥನೆ ನೀಡಿದೆ. ಇಲ್ಲಿ ಇಷ್ಟರತನಕ ಹತ್ತು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಇರಾನ್‌ನಲ್ಲಿ ಲಾಕ್‌ಡೌನ್ ಸಡಿಲಿಕೆ ಬಹಳ ಬೇಗನೆ ಆಗಿತ್ತು. ದೇಶದ ಆರ್ಥಿಕತೆ ಪಾತಾಳಕ್ಕಿಳಿಯುತ್ತಿರುವುದರಿಂದ ಕಳವಳಗೊಂಡಿದ್ದ ಸರಕಾರ ಜನರಿಗೆ ಸ್ವಯಂ ರಕ್ಷಣೆಯ ಜವಾಬ್ದಾರಿ ವಹಿಸಿ ಲಾಕ್‌ಡೌನ್ ಸಡಿಲಿಸಿದೆ.
ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಈ ಮುಂತಾದ ನಿಯಮಗಳು ಜಾರಿಯಲ್ಲಿದ್ದರೂ ಜನರು ಮುತುವರ್ಜಿಯಿಂದ ಪಾಲಿಸುತ್ತಿಲ್ಲ. ಹಬ್ಬದ ಸಂದರ್ಭದಲ್ಲಿ ನೆರವೇರಿದ ಸಾಮೂಹಿಕ ಪ್ರಾರ್ಥನೆಗಳು ಸೋಂಕು ಕ್ಷಿಪ್ರವಾಗಿ ಹರಡಲು ಕಾರಣವಾಗಿರಬಹುದು ಎಂಬ ಅನುಮಾನ ಇದೆ. ಬುಧವಾರ ಇಲ್ಲಿ ಕೋವಿಡ್‌ಗೆ 59 ಬಲಿಯಾಗುವುದರೊಂದಿಗೆ ಸಾವಿನ ಸಂಖ್ಯೆ 8,071ಕ್ಕೇರಿದೆ. ಒಟ್ಟು 1,64,270 ಮಂದಿ ಸೋಂಕಿಗೊಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.