ದೆಹಲಿ ಬಳಿಕ ಜಾರ್ಖಂಡ್ ನಲ್ಲೂ ಏಪ್ರಿಲ್ 22ರಿಂದ 29ರವರೆಗೆ ಲಾಕ್ ಡೌನ್ ಘೋಷಣೆ
ಶಾಲಾ, ಕಾಲೇಜುಗಳು, ಅಂಗನವಾಡಿ ಕೇಂದ್ರಗಳು, ತರಬೇತಿ ಕೇಂದ್ರ ಬಂದ್ ಮಾಡುವಂತೆ ತಿಳಿಸಿದ್ದಾರೆ.
Team Udayavani, Apr 20, 2021, 4:42 PM IST
ರಾಂಚಿ: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾರ್ಖಂಡ್ ಸರ್ಕಾರ ಏಪ್ರಿಲ್ 22ರಿಂದ 29ರವರೆಗೆ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ಮಂಗಳವಾರ(ಏಪ್ರಿಲ್ 20) ಘೋಷಿಸಿದೆ.
ಲಾಕ್ ಡೌನ್ ಸಂದರ್ಭದಲ್ಲಿ ಕೆಲವು ವಿನಾಯ್ತಿ ನೀಡಲಾಗಿದ್ದು, ಅಗತ್ಯ ವಸ್ತುಗಳಿಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದೆ. ಧಾರ್ಮಿಕ ಕೇಂದ್ರಗಳು ಎಂದಿನಂತೆ ತೆರೆಯಲಿದ್ದು, ಯಾವುದೇ ಕಾರಣಕ್ಕೂ ಭಕ್ತರು ಗುಂಪುಗೂಡಲು ಅವಕಾಶವಿಲ್ಲ. ಆದರೆ ಗಣಿಗಾರಿಕೆ, ಕೃಷಿ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮತಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೋರೆನ್ ಭಾನುವಾರ ನಿರ್ಬಂಧಗಳನ್ನು ವಿಧಿಸಿ, ಎಲ್ಲಾ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದ್ದರು. ತಕ್ಷಣಕ್ಕೆ ಜಾರಿಗೆ ಬರುವಂತೆ ಶಾಲಾ, ಕಾಲೇಜುಗಳು, ಅಂಗನವಾಡಿ ಕೇಂದ್ರಗಳು, ತರಬೇತಿ ಕೇಂದ್ರ ಬಂದ್ ಮಾಡುವಂತೆ ತಿಳಿಸಿದ್ದಾರೆ.
ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಜನರು ಮನೆಯಲ್ಲಿಯೇ ಇರುವಂತೆ ಮುಖ್ಯಮಂತ್ರಿ ಹೇಮಂತ್ ಸೋರೆನ್ ಟ್ವೀಟರ್ ನಲ್ಲಿ ವಿಡಿಯೋ ಸಂದೇಶದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕೇವಲ 50 ಜನರು ಭಾವಹಿಸುವ ಮೂಲಕ ಮದುವೆ ಕಾರ್ಯಕ್ರಮ ನೆರವೇರಿಸಲು ಅನುಮತಿ ನೀಡಲಾಗುವುದು. ಒಂದು ತಿಂಗಳ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸೋರೆನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.